ಹಾನಗಲ್-ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ: ಸಿಎಂ ಬಸವರಾಜ ಬೊಮ್ಮಾಯಿ
ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನಮಗಿನ್ನೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Published: 02nd November 2021 09:58 AM | Last Updated: 02nd November 2021 10:55 AM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನಮಗಿನ್ನೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿಗೆ ಪ್ರವಾಸಕ್ಕೆ ಹೊರಡುವ ಮುನ್ನ ತಮ್ಮ ಆರ್ ಟಿ ನಗರ ನಿವಾಸದ ಹೊರಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿ ಇನ್ನೆರಡು ಗಂಟೆಗಳಲ್ಲಿ ಎರಡೂ ಕ್ಷೇತ್ರಗಳ ಫಲಿತಾಂಶಗಳ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಎರಡೂ ಕ್ಷೇತ್ರಗಳಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.
ಇತ್ತೀಚಿನ ವರದಿ ಬಂದಾಗ ಹಾನಗಲ್ ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಹಣಾಹಣಿ ನಡೆಯುತ್ತಿದೆ. ಹೀಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಗೆ ತೀವ್ರ ಒತ್ತಡ ಕಾಡುತ್ತಿದೆ. ಶ್ರೀನಿವಾಸ್ ಮಾನೆ ಖಾಸಗಿ ಹೊಟೇಲ್ ನಲ್ಲಿ ಕುಳಿತು ಫಲಿತಾಂಶ ವೀಕ್ಷಿಸುತ್ತಿದ್ದಾರೆ. ಬಿಜೆಪಿಯ ಶಿವರಾಜ್ ಸಜ್ಜನರ್ ಅವರಿಗೆ ಟೆನ್ಷನ್ ಹೆಚ್ಚಾಗುತ್ತಿದೆ.
ಸಿಂದಗಿಯಲ್ಲಿ ನಾಲ್ಕನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮುಖ್ಯಮಂತ್ರಿಯಿಂದ ಬಾಗಿನ: ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಮರ್ಪಣೆ ಮಾಡಲು ಮೈಸೂರಿಗೆ ತೆರಳುತ್ತಿದ್ದಾರೆ.
Follow @XpressBengaluru to get the latest updates
— TNIE Karnataka (@XpressBengaluru) November 2, 2021
At Sindagi, BJP Candidate Ramesh Bhusanur is leading and at Hangal, there is tight fight between Shivaraj Sajjanar (BJP) and Srinivas Mane (Cong)@NewIndianXpress @santwana99 @Arunkumar_TNIE @MahiPEN_TNIE