ಬಿಟ್ ಕಾಯಿನ್ ಹಗರಣದಲ್ಲಿರುವ ರಾಜಕೀಯ ನಾಯಕರ ಹೆಸರು ಬಹಿರಂಗಪಡಿಸಿ: ಸಿದ್ದರಾಮಯ್ಯ

ಬಿಟ್ ಕಾಯಿನ್ ಹಗರಣದಲ್ಲಿರುವ ರಾಜಕೀಯ ನಾಯಕರ ಹೆಸರನ್ನು ಸಾರ್ವಜನಿಕರಿಗೆ ತಿಳಿಸಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳವಾರ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿರುವ ರಾಜಕೀಯ ನಾಯಕರ ಹೆಸರನ್ನು ಸಾರ್ವಜನಿಕರಿಗೆ ತಿಳಿಸಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳವಾರ ಆಗ್ರಹಿಸಿದ್ದಾರೆ.

ಹಗರಣ ಕುರಿತು ಮಾತನಾಡಿರುವ ಅರು, ಕಾಂಗ್ರೆಸ್ ಆಗಲೀ ಅಥವಾ ಬಿಜೆಪಿಯೇ ಆಗಲಿ, ಹಗರಣದಲ್ಲಿ ಭಾಗಿಯಾಗಿರುವ ಯಾವುದೇ ರಾಜಕೀಯ ನಾಯಕರಾದರೂ ಅವರ ಹೆಸರನ್ನು ಬಹಿರಂಗಪಡಿಸಿ. ಜನರಿಗೂ ಸತ್ಯಾಸತ್ಯತೆಗಳು ತಿಳಿಯಲಿ ಎಂದು ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ರಾಜ್ಯದ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿವೆ. ಆದರೂ ಸರ್ಕಾರವೇ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐಗೆ ಇದೇ ಪ್ರಕರಣದ ತನಿಖೆಯ ಹೊಣೆಯನ್ನು ವಹಿಸಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಸಮಗ್ರ ತನಿಖೆ ನಡೆಸಿದ್ದರೆ ಹೆಚ್ಚಿನ ತನಿಖೆಗೆ ಇಡಿ ಮತ್ತು ಸಿಬಿಐಗೆ ಒಪ್ಪಿಸುವ ಅನಿವಾರ್ಯತೆ ಯಾಕೆ ಬಂತು?’ ಎಂದು ಪ್ರಶ್ನಿಸಿದ್ದಾರೆ.

‘ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಗಮನಿಸಿದರೆ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ.  ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದವರ ವಿರುದ್ದ ಆರೋಪ ಮಾಡಲು ಹೋಗದೆ, ತನಿಖೆಯ ಪೂರ್ಣ ವಿವರವನ್ನು ಸಾರ್ವಜನಿಕರ ಮುಂದಿಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ 5000 ಬಿಟ್ ಕಾಯಿನ್ ದೊಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್ ಎಲ್ಲಿದೆ? ಅದನ್ನು ಜಪ್ತಿ ಮಾಡಲಾಗಿದೆಯೇ? ಇಲ್ಲವೇ ಅವು ಇನ್ನೂ ಪತ್ತೆಯಾಗಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com