ನಾನಿನ್ನೂ ಬದುಕಿದ್ದೇನೆ, 2023 ಚುನಾವಣೆ ವೇಳೆ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುವೆ: ಹೆಚ್.ಡಿ. ದೇವೇಗೌಡ

ಚುನಾವಣಾ ಫಲಿತಾಂಶದಿಂದ ನಾವು ಕುಗ್ಲಿಲ್ಲ. ನಾನಿನ್ನೂ ಬದುಕಿದ್ದೇನೆ. 2023ರ ಚುನಾವಣೆ ವೇಳೆ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುತ್ತೇನೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.
ಹೆಚ್.ಡಿ.ದೇವೇಗೌಡ
ಹೆಚ್.ಡಿ.ದೇವೇಗೌಡ

ಬೆಂಗಳೂರು: ಚುನಾವಣಾ ಫಲಿತಾಂಶದಿಂದ ನಾವು ಕುಗ್ಲಿಲ್ಲ. ನಾನಿನ್ನೂ ಬದುಕಿದ್ದೇನೆ. 2023ರ ಚುನಾವಣೆ ವೇಳೆ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುತ್ತೇನೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.
    
ಉಪ ಸಮರದ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನಾನು ಎಂದು ಉಪಚುನಾವಣೆಗಳ ಪ್ರಚಾರಕ್ಕೆ ಹೋದವನಲ್ಲ. ಆದರೂ ಸಿಂದಗಿ ಆದರೆ ಸಿಂದಗಿ ಉಪಚುನಾವಣೆ ಹೋಗಿದ್ದೆ. ಸಿಂದಗಿ ಜನರು ಕಷ್ಟದಲ್ಲಿದ್ದರು, ಕೂಲಿಗೆ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಿದ್ದರು. ಆ ಭಾಗದ ಜನರಿಗೆ ಏನು ಮಾಡಿದ್ದೇನೆ ಎನ್ನುವುದನ್ನು ಜನರೇ ಹೇಳುತ್ತಾರೆ. ಮನಗೊಳಿಯವರು ಸಮಾಜವಾದಿ ಜನತಾ ಪಕ್ಷದಿಂದ ನಿಂತು ಸೋತಿದ್ದರು. ಮತ್ತೆ ನಮ್ಮ ಪಕ್ಷಕ್ಕೆ ಬಂದರು, ಗೆದ್ದರು ಅವರನ್ನು ಮಂತ್ರಿ ಮಾಡಿದ್ದೆವು. ಅವರ ಮಗ ಕಾಂಗ್ರೆಸ್ ಗೆ ಹೋಗಿದ್ದನ್ನು ಚರ್ಚೆ ಮಾಡಲ್ಲ. ಈ ಬಾರಿಯ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ಆದರೆ ಬಿಜೆಪಿ, ಕಾಂಗ್ರೆಸ್​ ಪಕ್ಷ ಹಣದ ಹೊಳೆ ಹರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇನ್ನೂಈ ಫಲಿತಾಂಶದಿಂದ ನಾನು ಧೃತಿಗೆಟ್ಟಿಲ್ಲ. ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಇದೆ. ರಾಜ್ಯ ಪ್ರವಾಸ ಮಾಡುತ್ತೇನೆ. ಉಪ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಯಾರೂ ಅಷ್ಟು ದುಡ್ಡು ಖರ್ಚು ಮಾಡೊಕಾಗಲ್ಲ. ನಾನು ಜೆಡಿಎಸ್ ಸೊರಗಿರುವ ಕ್ಷೇತ್ರ ಪ್ರವಾಸ ಮಾಡುತ್ತೇನೆಂದು ಹೇಳಿದ್ದಾರೆ.

ಇದೇ ವೇಳೆ ಸಿಂದಗಿಯಲ್ಲಿ ಜೆಡಿಎಸ್​ ಸ್ಥಾನದ ಬಗ್ಗೆ ಕೇಳಿದ್ದಕ್ಕೆ ಎಚ್​ಡಿಡಿ ಗರಂ ಆದ ಅವರು, ಸಿಂಧಗಿ ಕ್ಷೇತ್ರದ ಅಂತರದ ವಿಷಯ ಬೇಕಾಗಿಲ್ಲ. ಈ ಹಿಂದೆ ಕಾಂಗ್ರೆಸ್​ ಅಲ್ಲಿ ಮೂರನೇ ಸ್ಥಾನದಲ್ಲಿತ್ತು. ಹಾನ್​ಗಲ್​ ಬಗ್ಗೆ ನಾನು ಮಾತನಾಡಲ್ಲ. ಸಿಂಧಗಿ, ಹಾನಗಲ್ ಬಿಟ್ಟರೆ ಬೇರೆಲ್ಲಾ ಮನೆಗೆ ಹೋಗುತ್ತಾರಾ?... ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್​​ ಪಕ್ಷದ ಮಹತ್ವ ತಿಳಿಸುತ್ತೇವೆ ಎಂದು ತಿಳಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com