ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ರಾಜ್ಯದ ಅಭಿವೃದ್ಧಿಗೆ ಪಣ

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 100 ದಿನದ ಸಂಭ್ರಮ. ಬದಲಾದ ರಾಜಕೀಯದಲ್ಲಿ ಬಿಎಸ್ ಯಡಿಯೂರಪ್ಪ ದಿಢೀರ್ ರಾಜೀನಾಮೆ ನೀಡಿದ ನಂತರ ಅಚ್ಚರಿ ರೀತಿಯಲ್ಲಿ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಯಶಸ್ವಿ 100 ದಿನಗಳನ್ನು ಪೂರೈಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 100 ದಿನದ ಸಂಭ್ರಮ. ಬದಲಾದ ರಾಜಕೀಯದಲ್ಲಿ ಬಿಎಸ್ ಯಡಿಯೂರಪ್ಪ ದಿಢೀರ್ ರಾಜೀನಾಮೆ ನೀಡಿದ ನಂತರ ಅಚ್ಚರಿ ರೀತಿಯಲ್ಲಿ ಮುಖ್ಯಮಂತ್ರಿಯಾದ  ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಯಶಸ್ವಿ 100 ದಿನಗಳನ್ನು ಪೂರೈಸಿದೆ.

ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬರುವ ದಿನಗಳಲ್ಲಿ ಮತ್ತಷ್ಟು ಜನ ಪರ ಕಾರ್ಯಗಳನ್ನು ಮಾಡುವುದಾಗಿ ಭರವಸೆ ನೀಡಿದರು. 

ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು, ಜನರ ಹತ್ತಿರ ಸರ್ಕಾರ ಮತ್ತು ಸೇವೆಯನ್ನು ಕೊಂಡೊಯ್ಯಬೇಕು, ಆರ್ಥಿಕ ಬೆಳವಣಿಗೆ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲವನ್ನು ಉಪಯೋಗಿಸಿಕೊಳ್ಳಬೇಕು ಎಂಬ ಚಿಂತನೆಯನ್ನಿಟುಕೊಂಡು ಸರ್ಕಾರವನ್ನು ಮುನ್ನಡೆಸುವುದಾಗಿ ತಿಳಿಸಿದರು.

ಇದಕ್ಕೂ ಮುನ್ನ ಟ್ವಿಟ್ ಮಾಡಿದ್ದ ಸಿಎಂ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಎಂಬ ಧ್ಯೇಯವಾಕ್ಯದಿಂದ ಪ್ರೇರಿತರಾಗಿ ಆದೇ ಹಾದಿಯಲ್ಲಿ ಸಾಗುತ್ತಿದ್ದೇವೆ. ರಾಜ್ಯದ 6.5 ಕೋಟಿ ಕನ್ನಡಿಗರ ಆಶೀರ್ವಾದದೊಂದಿಗೆ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಪಣ ತೊಟ್ಟಿದೆ. ಕನ್ನಡಿಗರ ಬದುಕನ್ನು ನವ ಚೈತ್ಯದಿಂದ ಸಶಕ್ತಗೊಳಿಸುವ ನಿಟ್ಟಿನಲ್ಲಿ ಕೆಲಸವನ್ನು ಮುಂದುವರೆಸಿದ್ದೇವೆ, ಮುಂಬರುವ ದಿನಗಳಲ್ಲಿ ಅಭಿವೃದ್ಧಿ ವೇಗವನ್ನು ಹೆಚ್ಚಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com