ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆಯಾಗಿಲ್ಲ: ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೇರಿದಂತೆ ಕರ್ನಾಟಕದ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಚಿವ ಆರ್‌.ಅಶೋಕ್‌ ಅವರು ಭಾನುವಾರ ಹೇಳಿದ್ದಾರೆ.
ಆರ್‌.ಅಶೋಕ್‌
ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೇರಿದಂತೆ ಕರ್ನಾಟಕದ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಯಾವುದೇ ಚರ್ಚೆಗಳೂ ನಡೆದಿಲ್ಲ ಎಂದು ಸಚಿವ ಆರ್‌.ಅಶೋಕ್‌ ಅವರು ಭಾನುವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ಭಾನುವಾರ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ರಾಜ್ಯ ಕಾರ್ಯಾಲಯದಿಂದ ವರ್ಚುಯಲ್‌ ಮೂಲಕ ಪಾಲ್ಗೊಂಡ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಇತ್ತೀಚೆಗೆ ನಿಧನರಾದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಹೆಸರನ್ನು ಸಭೆಯಲ್ಲಿ ಹೇಳಲಾಯಿತು. ಹಾಗೆಯೇ ಹಾನಗಲ್‌ ಶಾಸಕ ಸಿ.ಎಂ. ಉದಾಸಿ ಅವರನ್ನು ಸ್ಮರಿಸಿ ಸಂತಾಪ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಎರಡು ಗಂಟೆಗಳ ಕಾಲ ನಡೆದಸಭೆ ನಡೆಸಲಾಗಿದ್ದು, ಈ ವೇಳೆ ಮುಂಬರುವ ಉತ್ತರಪ್ರದೇಶ ಸೇರಿದಂತೆ ಐರು ರಾಜ್ಯಗಳ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು. ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಕುರಿತು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು ಎಂದು ಹೇಳಿದರು.

ಸಭೆಯಲ್ಲಿ ಮೋದಿಯವರನ್ನು ಕೊಂಡಾಡಲಾಯಿತು. ಕೋವಿಡ್ ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಆಕ್ಸಿಜನ್ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದ್ದು, ಲಸಿಕೆ ಉತ್ಪಾದನೆ, ಇತರೆ ದೇಶಗಳಿಗೆ ರಫ್ತು ಮಾಡಿದ್ದು, 100 ಕೋಟಿ ಜನರಿಗೆ ಲಸಿಕೆ ನೀಡಿತ್ತು, ದೇಶದ ಆರ್ಥಿಕತೆಯನ್ನು ಉತ್ತಮ ರೀತಿಯಲ್ಲಿರುವಂತೆ ನೋಡಿಕೊಂಡಿದ್ದ ಕಾರ್ಯ ಕುರಿತು ಮೋದಿಯವರಿಗೆ ಮೆಚ್ಚುಗೆಗಲು ವ್ಯಕ್ತವಾದವು. ಕೇಂದ್ರ ಹಾಗೂ ರಾಜ್ಯಗಳಲ್ಲಿ ಒಂದೇ ಸರ್ಕಾರವಿದ್ದು, ಇದೀಗ ಪಕ್ಷದ ಕಾರ್ಯಕರ್ತರು ಜನರಿಗೆ ಸೇವೆ ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇದು ಇದೇ ರೀತಿ ಮುಂದುವರೆಯಲಿದೆ. ಇದರ ಕುರಿತಂತೆಯೂ ಸಭೆಯಲ್ಲಿ ಗಮನಹರಿಸಲಾಯಿತು ಎಂದು ತಿಳಿಸಿದರು.

ಇದೇ ವೇಳ ಹಾನಗಲ್ ಸೋಲು ಕುರಿತು ಮಾತನಾಡಿ, ಆ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಕಷ್ಟಕರವಾಗಿತ್ತು. ಕಳೆದ ಬಾರಿಯ ಚುನಾವಣೆಯಲ್ಲಿಯೂ ಉದಾಸಿಯವರು ಕೆಲವೇ ಅಂತರಗಳಲ್ಲಿ ಗೆಲುವು ಸಾಧಿಸಿದ್ದರು. ಆದರೆ, ಮುಂದಿನ ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com