ಬಿಟ್ ಕಾಯಿನ್ ಆರೋಪಿಗೆ ನಲಪಾಡ್, ದರ್ಶನ್ ಲಮಾಣಿ ಸಂಪರ್ಕ: ತಮ್ಮ ತಪ್ಪನ್ನು ಬಿಜೆಪಿ ತಲೆಗೆ ಕಟ್ಟುವ ಚಾಳಿ ಕಾಂಗ್ರೆಸ್ ಗೆ!

ಬಿಟ್ ಕಾಯಿನ್ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ, ಆರೋಪಿ ಶ್ರೀ ಕೃಷ್ಣನನ್ನು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಟ್ ಕಾಯಿನ್ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ, ಆರೋಪಿ ಶ್ರೀ ಕೃಷ್ಣನನ್ನು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಇದೇ ವೇಳೆ ಸಿದ್ದರಾಮಯ್ಯ ಅವಧಿಯಲ್ಲಿಯೇ ಬಿಟ್‌ ಕಾಯಿನ್‌ ದಂಧೆಯ ಆರೋಪಿ ಶ್ರೀಕಿಯನ್ನು ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು ಎಂದು ಬಿಜೆಪಿ ಆರೋಪಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ,  ಸಿದ್ದರಾಮಯ್ಯ ಅವಧಿಯಲ್ಲಿಯೇ ಆರೋಪಿಯನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು.  ಈಗ ಅದೇ ಸಿದ್ದರಾಮಯ್ಯ ಈಗ  ಬಿಟ್ ಕಾಯಿನ್ ಆರೋಪಿಗೆ ಕಾಂಗ್ರೆಸ್‌ ನಾಯಕರ ಜೊತೆ ಇರುವ ಸಂಬಂಧವನ್ನು ಉಲ್ಲೇಖ ಮಾಡದೆ, ಬಿಜೆಪಿ ವಿರುದ್ಧ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ ಎಂದು ಹೇಳಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಿಟ್ ಕಾಯಿನ್ ದಂಧೆ ನಡೆದಿದೆ. ಈ ದಂಧೆಯ ಆರೋಪಿಯು ಯುವ ಕಾಂಗ್ರೆಸ್‌ ನಿಯೋಜಿತ ಅಧ್ಯಕ್ಷ ಮಹಮ್ಮದ್‌ ನಲಪಾಡ್‌ ಹಾಗೂ ಮಾಜಿ ಸಚಿವ ಲಮಾಣಿ ಪುತ್ರ ದರ್ಶನ್‌ ನಡುವೆ‌ ಅವ್ಯವಹಾರ ನಡೆಸಿರುವ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಚಾರ್ಜ್‌ ಶೀಟ್‌ನಲ್ಲಿ ಉಲ್ಲೇಖವಿದೆ.

ತಾವು ಮಾಡಿದ ತಪ್ಪುಗಳನ್ನು ಬಿಜೆಪಿಯ ತಲೆಗೆ ಕಟ್ಟುವ ಚಾಳಿ ಕಾಂಗ್ರೆಸ್ ಪಕ್ಷ ಹೊಂದಿದೆ. ರಫೇಲ್ ಯುದ್ಧ ವಿಮಾನ ಖರೀದಿಗೆ ಲಂಚ ಬಯಸಿದ್ದ ಕಾಂಗ್ರೆಸ್ ನಾಯಕರು ನಂತರ ಬಿಜೆಪಿ ವಿರುದ್ಧ ಆರೋಪಿಸಿದ್ದರು. ಬಿಟ್ ಕಾಯಿನ್ ವಿಚಾರವೂ ಇದೇ ರೀತಿಯಲ್ಲಿ ಸಾಗುತ್ತಿದೆ. ಬಿಟ್‌ ಕಾಯಿನ್‌ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಜವಾಬ್ದಾರಿಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳಿದ್ದರೆ ಬಹಿರಂಗಪಡಿಸಬೇಕು ಎಂದು ಹೇಳಿದೆ.

ಡಾರ್ಕ್ ನೆಟ್ ಮತ್ತು ಬಿಟ್ ಕಾಯಿನ್ ಜೊತೆ ಡ್ರಗ್ಸ್ ಹಗರಣಕ್ಕೆ ನಂಟಿದೆ ಎಂದು ನಾವು ಮೊದಲೇ ಪ್ರತಿಪಾದಿಸಿದ್ದೆವು. ಡಿಕೆಶಿ ಆಪ್ತ ಮೊಹಮ್ಮದ್ ನಲಪಾಡ್ , ಉಮರ್ ನಲಪಾಡ್ ಬಿಟ್ ಕಾಯಿನ್ ದಂಧೆಯ ಆರೋಪಿಯ ಜೊತೆ ಹೊಂದಿರುವ ನಂಟೇ ಇದಕ್ಕೆ ಸಾಕ್ಷಿ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೇ ಶ್ರೀಕಿ ನಿರಾತಂಕವಾಗಿ ಇದ್ದಿದ್ದಲ್ಲವೇ? ಎಂದು ಪ್ರಶ್ನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com