ಸೂರಜ್ ರೇವಣ್ಣ
ಸೂರಜ್ ರೇವಣ್ಣ

ವಿಧಾನ ಪರಿಷತ್ ಚುನಾವಣೆ: ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧೆ; ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?

ಹಾಸನ ಜಿಲ್ಲೆಯಲ್ಲಿ ಎಂ. ಎ. ಗೋಪಾಲಸ್ವಾಮಿ ಅವರ ಸದಸ್ಯತ್ವದ ಅವಧಿ ಪೂರ್ಣಗೊಳ್ಳಲಿದ್ದು, ಒಂದು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಜೆಡಿಎಸ್‌ ಭದ್ರಕೋಟೆಯಾಗಿರುವ ಹಾಸನದಲ್ಲಿ ಒಂದು ಸ್ಥಾನಕ್ಕೆ ಯಾರಿಗೆ ಟಿಕೆಟ್ ಸಿಗಲಿದೆ?

ಬೆಂಗಳೂರು: ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ಮೂರು ಪಕ್ಷಗಳಲ್ಲಿ ಚರ್ಚೆಗಳು ಆರಂಭವಾಗಿವೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯುತ್ತಿದೆ. 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮೂರು ಪಕ್ಷಗಳು ತಯಾರಿ ಆರಂಭಿಸಿವೆ.

ಹಾಸನ ಜಿಲ್ಲೆಯಲ್ಲಿ ಎಂ. ಎ. ಗೋಪಾಲಸ್ವಾಮಿ ಅವರ ಸದಸ್ಯತ್ವದ ಅವಧಿ ಪೂರ್ಣಗೊಳ್ಳಲಿದ್ದು, ಒಂದು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಜೆಡಿಎಸ್‌ ಭದ್ರಕೋಟೆಯಾಗಿರುವ ಹಾಸನದಲ್ಲಿ ಒಂದು ಸ್ಥಾನಕ್ಕೆ ಯಾರಿಗೆ ಟಿಕೆಟ್ ಸಿಗಲಿದೆ? ಎಂಬುದು ಕುತೂಹಲದ ಪ್ರಶ್ನೆಯಾಗಿದೆ.

ಎಚ್. ಡಿ. ದೇವೇಗೌಡರ ಮೊಮ್ಮಗ ಮತ್ತು ಎಚ್. ಡಿ. ರೇವಣ್ಣ, ಭವಾನಿ ದಂಪತಿಗಳ ಪುತ್ರ ಸೂರಜ್ ರೇವಣ್ಣ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಸೂರಜ್ ರೇವಣ್ಣ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಹಾಸನದಲ್ಲಿ ನಡೆಯುವ ಪಕ್ಷದ ಸಭೆಗಳು, ಸಾರ್ವಜನಿಕ ಕಾರ್ಯಕ್ರಮದಲ್ಲಿ ಆಗಾಗ ಸೂರಜ್ ಕಾಣಿಸಿಕೊಳ್ಳುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಸೂರಜ್‌ ರೇವಣ್ಣಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬುತ್ತಿವೆ.

ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ,  ಪ್ರಸ್ತಾವನೆ ಪಕ್ಷದ ಕಚೇರಿಗೆ ಇನ್ನೂ ಬಂದಿಲ್ಲ "ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಇನ್ನು ಅಂತಿಮಗೊಳಿಸಿಲ್ಲ.

ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧೆ ಪ್ರಸ್ತಾವನೆ ಪಕ್ಷದ ಕಚೇರಿಗೆ ಇನ್ನೂ ಬಂದಿಲ್ಲ. ಹಾಸನ ಜಿಲ್ಲೆಯಲ್ಲಿ ಆರು ಶಾಸಕರು ಹಾಗೂ ಮುಖಂಡರು ಇದ್ದಾರೆ. ಅವರು ಯಾವ ಅಭ್ಯರ್ಥಿಯನ್ನು ಅಂತಿಮ ಮಾಡುತ್ತಾರೋ ನೋಡಬೇಕು. ಸೂಕ್ತ ಅಭ್ಯರ್ಥಿ ಹೆಸರನ್ನು ಸೂಚಿಸಿದ ನಂತರ ಮಾತನಾಡುತ್ತೇನೆ" ಎಂದು  ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com