ಸಿಂದಗಿ-ಹಾನಗಲ್ ಉಪ ಚುನಾವಣೆ ಸೋಲು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ವ ನಿರ್ಬಂಧ, ಹಳೆ ಮೈಸೂರು ಭಾಗಕ್ಕೆ ಒತ್ತು

ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಜೆಡಿಎಸ್ ಡಿಸೆಂಬರ್ 10ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ತನ್ನ ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಹೇರಿಕೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಜೆಡಿಎಸ್ ಡಿಸೆಂಬರ್ 10ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ತನ್ನ ಭದ್ರಕೋಟೆ ಹಳೆ ಮೈಸೂರು ಭಾಗದಲ್ಲಿ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಹೇರಿಕೊಂಡಿದೆ.

ಇಲ್ಲಿ ಜೆಡಿಎಸ್ ನಿಂದ ಯಾವುದೇ ಪ್ರಬಲ ಸ್ಪರ್ಧಿಗಳು ಇಲ್ಲದಿರುವುದರಿಂದ ಹಾಸನ, ತುಮಕೂರು, ಮೈಸೂರು, ಕೋಲಾರ ಮತ್ತು ಮಂಡ್ಯ ಸೇರಿದಂತೆ 6ರಿಂದ 7 ಸ್ಥಾನಗಳಿಗೆ ಮಾತ್ರ ಸ್ಪರ್ಧಿಸಲು ನಿರ್ಧರಿಸಿದೆ. ಹಾಸನದಲ್ಲಿ ದೇವೇಗೌಡರ ಮೊಮ್ಮಗ ಹೆಚ್ ಡಿ ರೇವಣ್ಣ ಅವರ ಇನ್ನೊಬ್ಬ ಪುತ್ರ ಡಾ ಸೂರಜ್ ಸ್ಪರ್ಧೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. 

ನನ್ನ ತಂದೆ ರೇವಣ್ಣ ಪರ ವಿಧಾನಸಭೆ ಚುನಾವಣೆಗೆ ನಾನು ಪ್ರಚಾರ ಮಾಡಿದ್ದೆ. ನಮ್ಮ ಪಕ್ಷದ ಕಾರ್ಯಕರ್ತರು ವಿಧಾನ ಪರಿಷತ್ ಗೆ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ನನ್ನ ತಾತ ದೇವೇಗೌಡರ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೋದರನೂ ಆಗಿರುವ ಸೂರಜ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಈ ಮೂಲಕ ದೇವೇಗೌಡರ ಕುಟುಂಬದಿಂದ ಮತ್ತೊಬ್ಬರು ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುತ್ತಿದ್ದಾರೆ. ಸೂರಜ್ ಅವರ ತಾಯಿ ಭವಾನಿ ಹಾಸನ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯೆ. ರೇವಣ್ಣ ಕುಟುಂಬದವರು ಇದುವರೆಗೆ ಸ್ಪರ್ಧಿಸಿದ ಚುನಾವಣೆಯಲ್ಲಿ ಸೋತಿಲ್ಲ. ಆದರೆ ಹೆಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಮಾತ್ರ 2019ರ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com