ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ: ತೇಪೆ ಹಚ್ಚಲು ಮುಂದಾದ ಭವಾನಿ ರೇವಣ್ಣ!

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಹಾಸನ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಹೆಸರು ಪೈನಲ್ ಆಗಿದೆ. 
ಭವಾನಿ ರೇವಣ್ಣ
ಭವಾನಿ ರೇವಣ್ಣ

ಹಾಸನ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಹಾಸನ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಹೆಸರು ಪೈನಲ್ ಆಗಿದೆ. 

ಪಕ್ಷದ ಶಾಸಕರು ಮತ್ತು ಹಿರಿಯ ನಾಯಕರ ಸಭೆಯಲ್ಲಿ ಡಾ.ಸೂರಜ್ ಗೌಡ ಹೆಸರು ಅವಿರೋಧವಾಗಿ ಆಯ್ಕೆಯಾಯಿತು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ  ಎಚ್ ಕೆ ಕುಮಾರಸ್ವಾಮಿ ತಿಳಿಸಿದ್ದಾರೆ.

ಡಾ. ಸೂರಜ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ಹೆಸರು ಕೂಡ ಕೇಳಿ ಬಂದಿತ್ತು. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಭವಾನಿ ರೇವಣ್ಣ, ಪರಿಷತ್ ಚುನಾವಣೆಯಲ್ಲಿ  ಸ್ಪರ್ಧಿಸುವಂತೆ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದ್ದರು. ಅವರಿಗೆ ನನ್ನ ಕೃತಜ್ಞತೆ ಸಲ್ಲಿಸುತ್ತೇನೆ, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com