ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಸೂಕ್ತ ಕ್ರಮ: ಬಿ.ಎಸ್,ಯಡಿಯೂರಪ್ಪ
ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಖಂಡಿತಾ ಕ್ರಮ ಕೈಗೊಳ್ಳುತ್ತಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.
Published: 19th November 2021 08:06 AM | Last Updated: 19th November 2021 08:06 AM | A+A A-

ಮಾಜಿ ಸಿಎಂ ಯಡಿಯೂರಪ್ಪ
ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಖಂಡಿತಾ ಕ್ರಮ ಕೈಗೊಳ್ಳುತ್ತಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.
ಉತ್ತರ ಕನ್ನಡದಲ್ಲಿ ನಡಯೆುತ್ತಿರುವ ಜನ ಸ್ವರಾಜ್ ಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾರ ಬಳಿ ದಾಖಲೆ ಇದ್ದರೂ ಕೊಡಲಿ. ಯಾವುದೇ ಪಕ್ಷದವರೂ ದಾಖಲೆ ನೀಡಿದರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಮೋದಿಯವರು ಹೇಳಿದ್ದಾರೆಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಅವರು, ತಮ್ಮೊಳಗಿನ ಒಳಜಗಳಗಳ ಕಾಣದಂತೆ ಮಾಡಲು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಆರೋಪ ಹಾಗೂ ವಾಕ್ಸಮರ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.