ಸನ್ಸ್ vs ಸನ್ಸ್; ಬಿಟ್ ಕಾಯಿನ್ ಬಿರುಗಾಳಿ: ಮೃತ ಪುತ್ರನನ್ನು ಎಳೆದು ತಂದ ಬಿಜೆಪಿ; ಆಡಳಿತ ಪಕ್ಷ-ಪ್ರತಿಪಕ್ಷಗಳ ಮಾತಿನ ಚಕಮಕಿ
ಬಿಟ್ ಕಾಯಿನ್ ಪ್ರಕರಣ ಕುರಿತು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವಿನ ಟ್ವಿಟರ್ ಸಮರ ತಾರಕಕ್ಕೇರಿದೆ.
Published: 19th November 2021 12:24 PM | Last Updated: 19th November 2021 01:47 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ಕುರಿತು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವಿನ ಟ್ವಿಟರ್ ಸಮರ ತಾರಕಕ್ಕೇರಿದೆ.
ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ನೆರವಿನಿಂದ ಶಾಂತಿನಗರ ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರೀಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಹ್ಯಾಕಿಂಗ್ ಮೂಲಕ ಗೆಲುವು ಸಾಧಿಸಿದ್ದಾರೆಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗಳ ಕಚೇರಿಗೆ ಬಂದಿರುವ ಲಿಖಿತ ದೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುಟುಂಬದ ಸದಸ್ಯರು, ಕೆಲವು ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಬಿಜೆಪಿ ಸಂಸದರ ಹೆಸರುಗಳಿವೆ ಎಂದು ಆರೋಪಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಲು ಬಿಜೆಪಿ ಟ್ವಿಟರ್ ನಲ್ಲಿ ಶ್ರೀಕಿಯ ಸ್ನೇಹಿತರ ಜೊತೆ ಸಿದ್ದರಾಮಯ್ಯ ಪುತ್ರ ರಾಕೇಶ್ ಇರುವ ಫೋಟೋವನ್ನು ಟ್ವೀಟ್ ಮಾಡಿದೆ.
ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಪ್ರಸ್ತಾಪಿಸಿರುವ ಸಿದ್ದರಾಮಯ್ಯ ಅವರೇ ಒಂದಿಷ್ಟು ಪ್ರಶ್ನೆಗಳು ಮತ್ತು ಒಂದಷ್ಟು ಚಿತ್ರಗಳಿವೆ. ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಉತ್ತರಿಸಿ ಎಂದು ಟಾಂಗ್ ಕೊಟ್ಟಿದೆ. ಪೋಟೋದಲ್ಲಿ ಹ್ಯಾಕರ್ ಶ್ರೀಕಿಯ ಸ್ನೇಹಿತ ಹೇಮಂತ್ ಮುದ್ದಪ್ಪ, ಸುನೀಲ್ ಹೆಗ್ಡೆ ಯಾರ ಜತೆಗಿದ್ದಾರೆ. ಒಮ್ಮೆ ನೋಡಿ, ಚಿತ್ರದಲ್ಲಿರುವ ಎಲ್ಲರನ್ನೂ ನೀವು ಗುರುತಿಸಬಲ್ಲಿರಿ ಎಂಬುದು ನಮ್ಮ ನಂಬಿಕೆ. ಆ ನಂಬಿಕೆ ನಿಜವೇ ಆಗಿದ್ದರೆ ಬಿಟ್ ಕಾಯಿನ್ ಹ್ಯಾಕಿಂಗ್ ದಂಧೆ ನಿಮ್ಮ ಕಾಲದಲ್ಲಿಯೇ ಆರಂಭವಾಗಿತ್ತು. ಆ ಬಗ್ಗೆ ನೀವು ಸ್ಪಷ್ಟ ಮಾಹಿತಿ ಹೊಂದಿದ್ದೀರಿ ಅಲ್ಲವೇ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಬಿಟ್ ಕಾಯಿನ್ ಹಗರಣಕ್ಕೆ ಸಿದ್ದರಾಮಯ್ಯ ಪುತ್ರನನ್ನು ಎಳೆತಂದ ಬಿಜೆಪಿ: ಫೋಟೋ ಸತ್ಯಾಸತ್ಯತೆ ಏನು?
ಬಿಜೆಪಿಯವರ ಈ ಟ್ವೀಟ್'ಗೆ ಕೆಂಡಾಮಂಡಲಗೊಂಡಿರುವ ಸಿದ್ದರಾಮಯ್ಯ ಅವರು, ತಮ್ಮ ಭ್ರಷ್ಟಾಚಾರ ಮುಚ್ಚಿ ಹಾಕಲು ಬಿಜೆಪಿಯು ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಎಳೆದು ತಂದಿದೆ. ಸರಿ, ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಿ ಎಂದು ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ.
ರಾಕೇಶ್ ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲೂ ಸಾಧ್ಯವಿಲ್ಲ. ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರ ಮಕ್ಕಳ ಹೆಸರೂ ಕೇಳಿ ಬರುತ್ತಿವೆ. ಬಿಜೆಪಿ ನಾಯಕರು ಜೇನುಗೂಡಿಗೆ ಕಲ್ಲೆಸೆಯುತ್ತಿದ್ದಾರೆ. ಕೆರಳಿದ ಜೇನು ನೊಣಗಳು ಯಾರಿಗೆಲ್ಲಾ ಕಚ್ಚಲಿವೆಯೋ ಗೊತ್ತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
2018ರಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿಯವರ ಜೊತೆಗಿರುವ ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಫೋಟೋವನ್ನು ಹೇಗೆ ವ್ಯಾಖ್ಯಾನಿಸಬೇಕು ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಕುಟುಂಬ ಸದಸ್ಯರ ಹೆಸರಲ್ಲಿ ಕೆಸರೆರಚಾಟ, ಎಳೆದಾಟವಾಗುತ್ತಿರುವುದು ಇದು ಮೊದಲೇನಲ್ಲ. ಬಿಜೆಪಿ ಕರ್ನಾಟಕ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು 2008 ಮತ್ತು 2021 ರಲ್ಲಿ ತಮ್ಮ ತಂದೆ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮುಖ್ಯಮಂತ್ರಿಗಳ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವನ್ನು ಇಲ್ಲಿ ಸ್ಮರಿಸಬಹುದಾಗಿದ