'ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ: ಶಂಖ ಊದಿಕೊಂಡು ರೈತರ ಕಣ್ಣೀರನ್ನು ಅಣಕಿಸಬೇಡಿ'

ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು  ಅಣಕಿಸಬೇಡಿ. ಕೃಷಿ ಕಾಯ್ದೆ ವಾಪಸ್‌ ಪಡೆದೆವು ಎಂದು ಬೀಗುತ್ತಾ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ.
ಬಿಜೆಪಿ ಜನ ಸ್ವರಾಜ್ ಯಾತ್ರೆ
ಬಿಜೆಪಿ ಜನ ಸ್ವರಾಜ್ ಯಾತ್ರೆ

ಬೆಂಗಳೂರು: ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು  ಅಣಕಿಸಬೇಡಿ. ಕೃಷಿ ಕಾಯ್ದೆ ವಾಪಸ್‌ ಪಡೆದೆವು ಎಂದು ಬೀಗುತ್ತಾ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಸರಕಾರವು ಅಧಿಕಾರ ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೆಯಬಾರದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ.

ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ. ಜಿಲ್ಲೆಗಳಿಗೆ ಕೋವಿಡ್‌ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ? ಅನೇಕ ಸಚಿವರಂತೂ ಜಿಲ್ಲೆಗಳ ಕಥೆ ಹಾಗಿರಲಿ, ಅವರ ಕಚೇರಿಗಳಲ್ಲೇ ಪತ್ತೆ ಇಲ್ಲ. ಮುಖ್ಯಮಂತ್ರಿಗಳು ಕೂಡಲೇ ಸಚಿವರನ್ನು ಜಿಲ್ಲೆಗಳಿಗೆ ಅಟ್ಟಬೇಕು. ಮಳೆ-ಬೆಳೆ ಪರಿಹಾರ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇಷ್ಟೆಲ್ಲ ಅನಾಹುತ ಆಗುತ್ತಿದ್ದರೂ ಕೃಷಿ ಸಚಿವರು, ಅವರ ಇಲಾಖೆ ಹಾಗೂ ಕಂದಾಯ ಇಲಾಖೆ ಏನು ಮಾಡುತ್ತಿದೆ? ಈಗಾಗಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಲಾಗಿದೆಯಾ? ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ ಎಂದು ಸಲಹೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com