ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ವಿಧಾನ ಪರಿಷತ್ ಚುನಾವಣೆಗೆ ಅಖಾಡ ರೆಡಿ

ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ 20 ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಈ ಆಯ್ಕೆಯು ಕೆಲವರಲ್ಲಿ ಅಸಮಾಧಾನವನ್ನುಂಟು ಮಾಡಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರೊಂದಿಗಿರುವ ಡಿಕೆ.ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ.
ಬೆಂಗಳೂರಿನಲ್ಲಿ ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರೊಂದಿಗಿರುವ ಡಿಕೆ.ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ.

ಬೆಂಗಳೂರು: ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ 20 ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಈ ಆಯ್ಕೆಯು ಕೆಲವರಲ್ಲಿ ಅಸಮಾಧಾನವನ್ನುಂಟು ಮಾಡಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮುದ್ರೆ ಇರುವ ಈ ಪಟ್ಟಿಯು ರಾಜ್ಯ ರಾಜಕೀಯದ ಇತರೆ ನಾಯಕರು ಹುಬ್ಬೇರಿಸುವಂತೆ ಮಾಡಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲ್ಮನೆಯ ನಿಕಟಪೂರ್ವ ಪ್ರತಿಪಕ್ಷ ನಾಯಕ ಎಸ್ಆರ್.ಪಾಟೀಲ್ ಅವರಿಗೆ ಟಿಕೆಟ್ ನಿರಾಕರಿಸಿದೆ.

ಪಾಟೀಲ್ ಪ್ರತಿನಿಧಿಸುತ್ತಿದ್ದ ವಿಜಯಪುರ-ಬಾಗಲಕೋಟೆ ಸ್ಥಾನದಿಂದ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್‌ಆರ್ ಪಾಟೀಲ್ ಹೆಸರನ್ನು ಪಕ್ಷ ಕೈಬಿಟ್ಟಿದೆ. ಇವರ ಬದಲಿಗೆ ಮಾಜಿ ಸಚಿವ ಎಂಬಿ ಪಾಟೀಲ್‌ ಅವರ ಕಿರಿಯ ಸಹೋದರ ಸುನೀಲಗೌಡ ಪಾಟೀಲ್‌ ಅವರಿಗೆ ಟಿಕೆಟ್ ನೀಡಲಾಗಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಗುರುತಿಸಿಕೊಂಡಿರುವ 73 ವರ್ಷದ ಮಾಜಿ ಸಚಿವ ಎಸ್ ಆರ್ ಪಾಟೀಲ್ ಅವರು, ಪಕ್ಷದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಡಿಸೆಂಬರ್ 13-24ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಅವರ ಕೊನೆಯ ಅಧಿವೇಶನವಾಗಿದೆ.

ಈ ನಡುವೆ ಶಿವಕುಮಾರ್ ಬೆಂಬಲಿಗ, ಬಿಜೆಪಿಯ ಮಾಜಿ ಸಚಿವ ಎ ಮಂಜು ಅವರ ಪುತ್ರ ಮಂತರ್ ಗೌಡ ಅವರನ್ನು ಕೊಡಗಿನಲ್ಲಿ ಅಭ್ಯರ್ಥಿಯಾಗಿರಿಸುವುದು ಹಲವರಲ್ಲಿ ಆಶ್ಚರ್ಯವನ್ನುಂಟು ಮಾಡಿದೆ,

ಇಲ್ಲಿಯವರೆಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಬಳಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿನೇಶ್ ಗೂಳಿಗೌಡ ಅವರನ್ನು ಮಂಡ್ಯದಲ್ಲಿ ಕಣಕ್ಕಿಳಿಸಲಾಗಿದೆ. ಆದರೆ, ಪಕ್ಷಕ್ಕೆ ಅವರ ಕೊಡುಗೆ ಏನು? ಇದು ಕಾರ್ಯಕರ್ತರ ಮನಸ್ಸಿಗೆ ನೋವು ತರುತ್ತದೆ ಎಂದು ನಾಯಕರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರು. ಚಿತ್ರದುರ್ಗದ ಅಭ್ಯರ್ಥಿ ಹಾಗೂ ಸಿದ್ದರಾಮಯ್ಯ ಬೆಂಬಲಿಗ ಬಿ ಸೋಮಶೇಖರ್ ಅವರಂತಹ ಅಭ್ಯರ್ಥಿಗಳ ವಿಶ್ವಾಸಾರ್ಹತೆ ಕುರಿತು ಪ್ರಶ್ನೆ ಮಾಡಲು ಆರಂಭಿಸಿದ್ದಾರೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಜ ಬಸವರಾಜ ಹಟ್ಟಿಹೊಳಿ ಬೆಳಗಾವಿಗೆ ಆಯ್ಕೆಯಾಗಿರುವುದು ಕೂಡ ಕುತೂಹಲ ಮೂಡಿಸಿದೆ. ಮೈಸೂರು-ಚಾಮರಾಜನಗರ ಉಭಯ ಸ್ಥಾನಕ್ಕೆ ಹಾಲಿ ಎಂಎಲ್ಸಿ ಆರ್ ಧರ್ಮಸೇನಾ ಅವರ ಹೆಸರನ್ನು ಪಕ್ಷ ಕೈಬಿಟ್ಟು, ಇವರ ಬದಲಿಗೆ ಡಾ.ಡಿ.ತಿಮ್ಮಯ್ಯ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಚಾಮರಾಜನಗರದಿಂದ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದರಿಂದ ಧರ್ಮಸೇನಾ ಹಿಂದೆ ಸರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ ಉಭಯ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಿದ್ದರಾಮಯ್ಯ ಬೆಂಬಲಿಗ ಹಾಗೂ ಬಂಡಾಯ ಕಾಂಗ್ರೆಸ್ ನಾಯಕ ಕೆ ಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ತುಮಕೂರು ಅಭ್ಯರ್ಥಿಯಾಗಿದ್ದಾರೆ. ಇನ್ನು ಬೀದರ್‌ನಿಂದ ಭೀಮರಾವ್ ಬಿ ಪಾಟೀಲ್, ಕೋಲಾರದಿಂದ ಎಂಎಲ್ ಅನಿಲ್ ಕುಮಾರ್ ಮತ್ತು ಬೆಂಗಳೂರು ನಗರದಿಂದ ಯೂಸುಫ್ ಷರೀಫ್ ಅವರನ್ನು ಪಕ್ಷವು ಕಣಕ್ಕಿಳಿಸಿದೆ.

ವಿಧಾನಸಭೆ ಚುನಾವಣೆ ಮೇಲೆ ನಾಯಕರ ಕಣ್ಣು!
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿರುವ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಹಾಸನದ ಎಂಎಲ್‌ಸಿ ಗೋಪಾಲಸ್ವಾಮಿ, ಕೆಆರ್‌ಪುರದಿಂದ ಸ್ಪರ್ಧಿಸಲು ಬಯಸಿರುವ ಬೆಂಗಳೂರು ನಗರದ ಮುಖ್ಯ ಸಚೇತಕ ಎಂ.ನಾರಾಯಣಸ್ವಾಮಿ, ಬಸವಕಲ್ಯಾಣದಿಂದ ಸ್ಪರ್ಧಿಸುವ ನಿರೀಕ್ಷೆಯಿರುವ ಬೀದರ್‌ನ ವಿಜಯ್‌ ಸಿಂಗ್‌, ಚಿತ್ರದುರ್ಗದ ರಘು ಆಚಾರ್‌ ಅವರು ಈ ಬಾರಿದ ವಿಧಾನ ಪರಿಷತ್ ಚುನಾಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದು, ಪರಿಷತ್ತಿನ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಸಕ್ರಿಯ ರಾಜಕಾರಣದಿಂದಲೇ ಹೊರ ನಡೆಯಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com