ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಸ್ಥಳೀಯ ಸಂಸ್ಥೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Published: 24th November 2021 11:42 AM | Last Updated: 24th November 2021 01:19 PM | A+A A-

ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಸ್ಥಳೀಯ ಸಂಸ್ಥೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಮಹಂತೇಶ್ ಕಾವಟಗಿಮಠ ಅವರು ಗೆದ್ದೇ ಗೆಲ್ಲುತ್ತಾರೆ. ಲಖನ್ ಅವರು ನಮ್ಮ ಪಕ್ಷದಲ್ಲಿ ಇಲ್ಲ, ಹೀಗಾಗಿ ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲಿನ ಬೆಳವಣಿಗೆ ಬಗ್ಗೆ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಜೊತೆ ಮಾತನಾಡಿ ತಿಳಿದುಕೊಳ್ಳುತ್ತಿದ್ದೇನೆ. ರಮೇಶ್ ಜಾರಕಿಹೊಳಿಯವರು, ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದೇ ತಮ್ಮ ಗುರಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ನಮ್ಮ ಅಭ್ಯರ್ಥಿಗೇನು ತೊಂದರೆಯಾಗುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಅಲ್ಲಿರುವ ವಸ್ತುಸ್ಥಿತಿ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ, ಬಾಲಚಂದ್ರ ಮತ್ತು ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.