ಜೆಡಿಎಸ್ ಸದಸ್ಯ ಸಿ.ಆರ್ ಮನೋಹರ್ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜು

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಡೆಯಿಂದ ಬೇಸರಗೊಂಡಿರುವ ಮೇಲ್ಮನೆಯ ಜೆಡಿಎಸ್ ಸದಸ್ಯ ಸಿ.ಆರ್ ಮನೋಹರ್ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜಾಗಿದ್ದು, ಶನಿವಾರ ಕೈ ಹಿಡಿಯಲಿದ್ದಾರೆ.
ಸಿಆರ್ ಮನೋಹರ್
ಸಿಆರ್ ಮನೋಹರ್

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಡೆಯಿಂದ ಬೇಸರಗೊಂಡಿರುವ ಮೇಲ್ಮನೆಯ ಜೆಡಿಎಸ್ ಸದಸ್ಯ ಸಿ.ಆರ್ ಮನೋಹರ್ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜಾಗಿದ್ದು, ಶನಿವಾರ ಕೈ ಹಿಡಿಯಲಿದ್ದಾರೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾಗಿರುವ ಸಿ.ಆರ್ ಮನೋಹರ್ ಅವರ ಸದಸ್ಯತ್ವದ ಅವಧಿ 2022ರ ಜ.5ಕ್ಕೆ ಕೊನೆಗೊಳ್ಳಲಿದೆ. ಅವಧಿ ಪೂರ್ಣಕ್ಕೆ ಮೂರು ತಿಂಗಳಷ್ಟೇ ಬಾಕಿ ಇದೆ. ಈ ನಡುವೆ ಜೆಡಿಎಸ್‌ನಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ. 

ಇದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಆಂತರಿಕ ಚರ್ಚೆಗೆ ಕಾರಣವಾಗಿದೆ. ಎರಡೂ ಜಿಲ್ಲೆಗಳಲ್ಲಿ ಗಣನೀಯವಾಗಿರುವ ಬಲಿಜ ಸಮುದಾಯದ ಮೇಲೆ ಮನೋಹರ್ ಅವರಿಗೆ ಉತ್ತಮವಾದ ಹಿಡಿತವಿದೆ. ಆ ಸಮುದಾಯದ ಪ್ರಮುಖ ನಾಯಕರಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. 

2009ರಿಂದಲೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕಾರಣದಲ್ಲಿ ಮನೋಹರ್ ಅವರ ಹೆಜ್ಜೆ ಗುರುತು ಪ್ರಬಲವಾಗಿದೆ. 2009ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಆರ್ ಮನೋಹರ್ 1.86 ಲಕ್ಷ ಮತಗಳನ್ನು ಪಡೆದಿದ್ದರು. 

2018ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 38 ಸಾವಿರ ಮತಗಳನ್ನು ಪಡೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com