ರಮೇಶ್ ಜಾರಕಿಹೊಳಿ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ: ಸಚಿವ ಈಶ್ವರಪ್ಪ
ಬೆಳಗಾವಿ ಬಿಜೆಪಿಯಲ್ಲಿ ಯಾವುದೂ ಸರಿಯಿಲ್ಲ ಎಂಬ ವದಂತಿಗಳ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಮೇಶ್ ಜಾರಕಿಹೊಳಿ ಎಂದಿಗೂ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದಾರೆ.
Published: 29th November 2021 10:42 AM | Last Updated: 29th November 2021 01:18 PM | A+A A-

ಸಚಿವ ಈಶ್ವರಪ್ಪ
ಬೆಳಗಾವಿ: ಬೆಳಗಾವಿ ಬಿಜೆಪಿಯಲ್ಲಿ ಯಾವುದೂ ಸರಿಯಿಲ್ಲ ಎಂಬ ವದಂತಿಗಳ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಮೇಶ್ ಜಾರಕಿಹೊಳಿ ಎಂದಿಗೂ ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರು ಅವರು ಬಿಜೆಪಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ, ಮೊದಲ ಆದ್ಯತೆ ಬಿಜೆಪಿಗೆ ಹಾಗೂ ಎರಡನೇ ಆದ್ಯತೆ ಸಹೋದರ ಲಖನ್ ಗೆ ಎಂದು ಈಗಾಗಲೇ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನಿಗೆ ಚೂರಿ ಹಾಕಿದಂತೆ ಇದೀಗ ರಮೇಶ್ ಜಾರಕಿಹೊಳಿಯವರು ಬಿಜೆಪಿಗೂ ದ್ರೋಹ ಮಾಡುತ್ತಿದ್ದಾರೆಂದು ಈ ಹಿಂದೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದರು.
ಇದನ್ನೂ ಓದಿ: ಮುರುಗೇಶ್ ನಿರಾಣಿ ಒಂದಲ್ಲ ಒಂದು ದಿನ ಸಿಎಂ ಆಗ್ತಾರೆ: ಸಚಿವ ಕೆ.ಎಸ್. ಈಶ್ವರಪ್ಪ
ಈ ಹೇಳಿಕೆ ವಿರುದ್ಧ ಈಶ್ವರಪ್ಪ ಅವರು ಕಿಡಿಕಾರಿದ್ದಾರೆ. ನಾವು ಈಗಾಗಲೇ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಗಾಗಿ ಹುಡುಕಾಡುತ್ತಿದೆ. ವಿರೋಧ ಪಕ್ಷದ ನಾಯಕ ಎಸ್ಆರ್. ಪಾಟೀಲ್ ಅವರನ್ನೂ ಕಣಕ್ಕಿಳಿಸದೆ, ಹೆಚ್ಚು ಹಣ ಇದ್ದವರಿಗೆ ಟಿಕೆಟ್ ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.
ಇದೇ ವೇಳೆ ಡಿಸೆಂಬರ್ 12 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ 10 ಹಿಂದುಳಿದ ವರ್ಗಗಳ ಮುಖಂಡರ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.