ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ನನಗೆ 35 ವರ್ಷಗಳ ರಾಜಕೀಯ ಅನುಭವವಿದೆ: ಪ್ರಕಾಶ್ ಹುಕ್ಕೇರಿ

ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ತಿಳಿಸಿದ್ದಾರೆ.
ಪ್ರಕಾಶ್ ಹುಕ್ಕೇರಿ
ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ತಿಳಿಸಿದ್ದಾರೆ.

ಚಿಕ್ಕೋಡಿಯಲ್ಲಿ ಮಾತನಾಡಿದ ಅವರು ‘ನಾನು ಕಳೆದ 35 ವರ್ಷಗಳಿಂದ ಜನಪ್ರತಿನಿಧಿಯಾಗಿ ಜನರ ಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕ ಕೂಡ ಆಗಿದ್ದೇನೆ. 1988 ರಲ್ಲಿ ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಿದ ಅನುಭವ ಸಹ ನನಗಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಹಲವು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ, ಪಕ್ಷವನ್ನು ತಳಮಟ್ಟದಿಂದ ಸದೃಡಗೊಳಿಸಲು ಕೆಲಸ ಮಾಡಿದ್ದೇನೆ ಎಂದು  ಹೇಳಿದ್ದಾರೆ. 

ಆರು ಬಾರಿ ಶಾಸಕರಾಗಿರುವ ಪ್ರಕಾಶ್ ಹುಕ್ಕೇರಿ ಒಂದು ಬಾರಿ ಚಿಕ್ಕೋಡಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. 

ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಹಾಗೂ ಸತೀಶ್ ಜಾರಕಿಹೊಳಿ ಸೇರಿದಂತೆ  ಕಾಂಗ್ರೆಸ್ ಮುಖಂಡರು ನನಗೆ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನು ನೀಡಬೇಕು. ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕೆಂದು ಜನರು ನನ್ನ ಬಳಿ ಕೇಳಿಕೊಳ್ಳುತ್ತಿದ್ದಾರೆ.

ಈ ನಿಟ್ಟಿನಲ್ಲಿ ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ. ಹಾಗಾಗಿ ಕಾಂಗ್ರೆಸ್ ಹೈಕಮಾಂಡ್ ನನಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹುಕ್ಕೇರಿ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com