ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆ: ಎಚ್ ಡಿಕೆ ತೀವ್ರ ಅಸಮಾಧಾನ
ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Published: 03rd October 2021 07:57 PM | Last Updated: 04th October 2021 01:13 PM | A+A A-

ಎಚ್.ಡಿ.ಕುಮಾರಸ್ವಾಮಿ
ಬಿಡದಿ: ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಡದಿಯ ತೋಟದಲ್ಲಿ ಇಂದು ಸುದ್ದಿಗಾರರ ಮಾತನಾಡಿದ ಅವರು, ಪಕ್ಷದಲ್ಲಿ ಬೆಳೆದು ನಂತರ ಹೊರ ಹೋಗಿ ನಿಂದನೆಯಲ್ಲಿ ತೊಡಗಿದರೆ ಮೌನವಾಗಿರಲು ಸಾಧ್ಯವಾಗದು ಏನೇ ಸಮಸ್ಸೆಯಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚೆಗೆ ತಯಾರಿದ್ದೇನೆ ಎಂದರು.
ಇದನ್ನೂ ಓದಿ: ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ: ಕೊಲೆಗೆಡುಕ ಸರ್ಕಾರ ಅಸಹಾಯಕರ ನೆರವಿಗೆ ಧಾವಿಸಲಿ: ಎಚ್ ಡಿ ಕುಮಾರಸ್ವಾಮಿ
ಪಕ್ಷದ ವಿಚಾರವಾಗಿ ಏನೇ ಸಮಸ್ಯೆ, ಗೊಂದಲ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆಗೆ ಸಿದ್ಧ, ಆದರೆ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು ಎಂದು ಅವರು ಹೇಳಿದರು.
ಯಾವುದೇ ಶಾಸಕರು ಬಂದರು ಮುಕ್ತವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಮುಂದೆಯೂ ಆಗುವುದಿಲ್ಲ ಪಕ್ಷದ ಕಾರ್ಯಗಾರಗಳು ಯಶಸ್ವಿಯಾಗಿ ನಡೆದಿವೆ. ಪಕ್ಷ ತಳಮಟ್ಟದಿಂದ ಪುಟಿದೇಳುತ್ತಿದೆ ಎಂದು ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದರು.