ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ: ಕೊಲೆಗೆಡುಕ ಸರ್ಕಾರ ಅಸಹಾಯಕರ ನೆರವಿಗೆ ಧಾವಿಸಲಿ: ಎಚ್ ಡಿ ಕುಮಾರಸ್ವಾಮಿ
ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
Published: 03rd October 2021 01:22 PM | Last Updated: 03rd October 2021 01:22 PM | A+A A-

ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು 'ಕೊಲೆಗೆಡುಕ ಸರ್ಕಾರ' ಎಂದು ಕಿಡಿಕಾರಿದ್ದಾರೆ.
ಸರ್ಕಾರ ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಇಂಥವರ ನೆರವಿಗೆ ಧಾವಿಸಬೇಕಿತ್ತು. ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ.
ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೋನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೇರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ.2/3
— H D Kumaraswamy (@hd_kumaraswamy) October 3, 2021