ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಅವರಿಗಿಂತ ಕ್ರೂರಿಗಳು: ಹೊರಗಿನವರಿಗಿಂತ ಒಳಗಿನವರ ದೌರ್ಜನ್ಯವೇ ಹೆಚ್ಚು ಆಘಾತಕಾರಿ!
ಬೆಂಗಳೂರು: ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಬ್ರಿಟಿಷರಿಗಿಂತ ಕ್ರೂರಿಗಳಾಗಿದ್ದಾರೆ' ಎಂದು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಹರಿಹಾಯ್ದಿದೆ.
ಬ್ರಿಟಿಷರು ಕೂಡ ಬಹಳ ಗೌರವದಿಂದ ನೋಡಿಕೊಳ್ಳುತ್ತಿದ್ದರು' ಎಂಬ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಹೇಳಿಕೆಯ ವಿಡಿಯೊ ತುಣುಕನ್ನು ಹಂಚಿಕೊಂಡಿರುವ ಬಿಜೆಪಿ, ದೇಶವನ್ನು ಸುದೀರ್ಘ ಕಾಲ ದಾಸ್ಯಕ್ಕೆ ತಳ್ಳಿದ ಬ್ರಿಟಿಷರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಡಿದ ಮಾತುಗಳಿವು ಎಂದಿದೆ.
ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಬ್ರಿಟಿಷರು ಅಹಿಂಸಾ ಸತ್ಯಾಗ್ರಹಕ್ಕೆ ಮಣಿದಿದ್ದರು, ಆದರೆ ಬಿಜೆಪಿಗರು ರೈತರ ಅಹಿಂಸಾ ಪ್ರತಿಭಟನೆಯಲ್ಲಿ ಮಾರಣಹೋಮ ನಡೆಸಿದರು. ಹೊರಗಿನವರ ದೌರ್ಜನ್ಯಕ್ಕಿಂತ ಒಳಗಿನವರ ದೌರ್ಜನ್ಯವೇ ಹೆಚ್ಚು ಆಘಾತಕಾರಿ ಎಂದು ಕಾಂಗ್ರೆಸ್ ಹೇಳಿದೆ.
'ತ್ಯಾಗ, ಬಲಿದಾನದಿಂದ ಪಡೆದ ಸ್ವಾತಂತ್ರ್ಯವನ್ನು ಒಂದೇ ಮಾತಿನಲ್ಲಿ ಕಾಂಗ್ರೆಸ್ ಅಧ್ಯಕ್ಷರು ನಾಶ ಮಾಡಿದ್ದಾರೆ. ಎಷ್ಟಾದರೂ ನೀವು ನಕಲಿ ಕಾಂಗ್ರೆಸ್ಸಿಗರಲ್ಲವೇ, ಇಲ್ಲಿಯವರಿಗಿಂತ ಹೊರಗಿನವರೇ ನಿಮಗೆ ಆಪ್ತರಾಗುತ್ತಾರೆ' ಎಂದು ಬಿಜೆಪಿ ಟ್ವೀಟ್‌ನಲ್ಲಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿತ್ತು
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ