ಉಪ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು: ಸಿದ್ದರಾಮಯ್ಯ

ಭರ್ಜರಿ ಬಹುಮತದೊಂದಿಗೆ ಉಪಚುನಾವಣೆಯಲ್ಲಿ ಗೆಲ್ಲುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ವಿಜಯಪುರ: ಭರ್ಜರಿ ಬಹುಮತದೊಂದಿಗೆ ಉಪಚುನಾವಣೆಯಲ್ಲಿ ಗೆಲ್ಲುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಂದಗಿ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರ ನಾಮಪತ್ರ ಸಲ್ಲಿಕೆ  ಮಾಡುವ ವೇಳೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ಅವಧಿಯಲ್ಲಿ ಹಣದುಬ್ಬರ ದರವು ದಾಖಲೆ ಮಟ್ಟ ತಲುಪಿದೆ ಎಂದು ಹೇಳಿದರು.

ಹಲವು ವರದಿಗಳ ಪ್ರಕಾರ ಮತ್ತು ಜನರ ನಾಡಿ ಮಿಡಿತದ ಪ್ರಕಾರ ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 25 ಸಾವಿರ ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆಗಳ ಜೊತೆಗೆ ಇಂಧನ, ಗ್ಯಾಸ್ ದವಸ ಧಾನ್ಯಗಳ ಬೆಲೆ ಅಧಿಕ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಸಾಮಾನ್ಯ ಜನರು ಜೀವನ ಮಾಡುವುದೇ ಕಷ್ಟವಾಗಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. 

ನಿಧನಕ್ಕೆ ಕೆಲವು ವಾರಗಳ ಮೊದಲು, ಮಾಜಿ ಸಚಿವ ಎಂ ಸಿ ಮನಗೂಳಿ ಅವರು ನನ್ನನ್ನು ಮತ್ತು ಸಿದ್ದರಾಮಯ್ಯ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು, ಅವರ ಪುತ್ರ ಅಶೋಕ್ ಮನಗೂಳಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಹಾಗೂ ರಾಜಕೀಯ ಬೆಳವಣಿಗೆಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು, ಅವರ ಆಸೆಯಂತೆ ಮತ್ತು ಎಲ್ಲಾ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಪಕ್ಷವು ಅಶೋಕ್  ಮನಗೂಳಿ ಅವರನ್ನು ಕಣಕ್ಕಿಳಿಸಿದೆ. ಜನರು ಅವರನ್ನು ಉಪಚುನಾವಣೆಯಲ್ಲಿ ತಮ್ಮ ನಾಯಕನನ್ನಾಗಿ ಆಯ್ಕೆ ಮಾಡುತ್ತಾರೆ ಎಂದು ನನಗೆ ವಿಶ್ವಾಸವಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 6.9 ಕೋಟಿ ಮೌಲ್ಯದ ವೈಯಕ್ತಿಕ ಆಸ್ತಿ ಘೋಷಿಸಿದ್ದಾರೆ. ಇವುಗಳಲ್ಲಿ ರೂ 6.36 ಕೋಟಿ ಮೌಲ್ಯದ ಸ್ಥಿರಾಸ್ತಿಗಳು ಮತ್ತು ರೂ. 33.46 ಲಕ್ಷ ಮೌಲ್ಯದ ಚರಾಸ್ತಿಗಳು ಸೇರಿವೆ. ಅವರು 2.25 ಲಕ್ಷ ಮೌಲ್ಯದ ಆಭರಣ ಮತ್ತು 62 ಲಕ್ಷ ಮೌಲ್ಯದ ಎರಡು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 

ಅವರು 86.65 ಲಕ್ಷ ರೂ. ಸಾಲ ಹೊಂದಿದ್ದಾರೆ. ಅವರ ಪತ್ನಿ ನಾಗರತ್ನ ಮನಗೂಳಿ ಅವರು ರೂ .63 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ರೂ .63.25 ಲಕ್ಷ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅವರಿಗೆ 37.55 ಲಕ್ಷ ರೂಪಾಯಿ ಸಾಲವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com