ಅವಧಿ ಪೂರ್ಣಗೊಳಿಸಲಿದ್ದೇನೆ, ನನ್ನ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದದ್ದೇನೆ, ಹಾಗೂ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದದ್ದೇನೆ, ಹಾಗೂ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ನಡೆದ ಇಂಡಿಯಾ ಕಾನ್ ಕ್ಲೇವ್ ನಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ,  ಉತ್ತಮ ಆಡಳಿತ ನೀಡುವ ಜತೆಗೆ ಮತ್ತೊಂದು ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕ ತರುತ್ತೇನೆ .ಎಷ್ಟು ಅವಧಿಗೆ ನಾನು ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ. ಈ ಅವಧಿಯಲ್ಲಿ ಏನು ಮಾಡುತ್ತೇನೆ ಎಂಬುದು ಮುಖ್ಯ. ಹಾಗಾಗಿ ನನಗೆ ದೊರಕಿರುವ ಈ ಅವಧಿಯಲ್ಲಿ ಉತ್ತಮ ಆಡಳಿತ ನೀಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ," ಎಂದು ಹೇಳಿದರು.

''ಬಿಜೆಪಿ ಈಗ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸಮಾಜದ ಎಲ್ಲ ವರ್ಗದವರನ್ನೂ ತಲುಪಿ ಅವರ ಬೆಂಬಲ ಪಡೆದ ಪಕ್ಷವಾಗಿದೆ. ಉತ್ತರ ಕರ್ನಾಟಕದಿಂದ ಲಿಂಗಾಯತ ಸಮುದಾಯದ ಹಲವು ಮಂದಿ ಬಿಜೆಪಿ ಶಾಸಕರು, ಸಂಸದರಾಗಿದ್ದಾರೆ. ಆದರೆ ಒಂದು ಪಕ್ಷ ಅಧಿಕಾರಕ್ಕೆ ಬರಬೇಕೆಂದರೆ ಪರಿಶಿಷ್ಟ ಜಾತಿ, ಪಂಗಡ, ಒಕ್ಕಲಿಗ, ಹಿಂದುಳಿದ ವರ್ಗದವರ ಬೆಂಬಲ ಬೇಕು. ಈ ವರ್ಗದವರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ,'' ಎಂದು ತಿಳಿಸಿದರು.

ಭಾರತೀಯ ಜನತಾ ಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. "ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನ ಲಿಂಗಾಯತ ಸಮುದಾಯದವರು ಭಾರತೀಯ ಜನತಾ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿದ್ದಾರೆ. 

ಆದರೆ ಒಂದು ಸರ್ಕಾರ ಅಧಿಕಾರಕ್ಕೆ ಬರಬೇಕೆಂದರೆ ಎಸ್ಸಿ, ಎಸ್ಟಿ, ಒಕ್ಕಲಿಗ, ಹಿಂದುಳಿದ ವರ್ಗದವರ ಬೆಂಬಲ‌ಬೇಕು. ಈ ವರ್ಗದವರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ," ಎಂದು ಅವರು ಹೇಳಿದರು. "ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಅವರು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅವರೊಬ್ಬ ಪ್ರಬಲ ನಾಯಕ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಅವರು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬಸವರಾಜ್‌ ಬೊಮ್ಮಾಯಿ ಹೇಳಿದರು.

ಪಕ್ಷ ಬದಲಾವಣೆ ಇಂದು ನಿನ್ನೆಯದಲ್ಲ, ನಿಜಲಿಂಗಪ್ಪ ಮತ್ತು ವಿರೇಂದ್ರ ಪಾಟೀಲ್ ಅವರ ಕಾಲದಿಂದಲೂ ನಡೆದು ಬಂದಿದೆ ಎಂದು ತಿಳಿಸಿದ್ದಾರೆ. ರಾಮಕೃಷ್ಣ ಹೆಗ್ಡೆ ಮತ್ತು ಎಸ್ ಆರ್ ಬೊಮ್ಮಾಯಿ ಅವರಂತಹ ನಾಯಕರುಗಳು ಸಹ ಪಕ್ಷ ತೊರೆದು ಬಿಜೆಪಿ ಸೇರಬೇಕಾಯಿತು, ರಾಜಕೀಯ ಮತ್ತು ನಾಯಕತ್ವದ ಹಾದಿ ಈ ಎಲ್ಲಾ ಬದಲಾವಣೆಗಳಿಗೆ ಮಾರ್ಗದರ್ಶನ ನೀಡಿದೆ" ಎಂದು ಹೇಳಿದರು.

ಕರ್ನಾಟಕ ರಾಜಕೀಯದಲ್ಲಿ ಲಾಬಿಗಳು ಇದ್ದವು ಮತ್ತು ಇವೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಮೊದಲು ಅಬಕಾರಿ ಲಾಬಿ ಇತ್ತು, ನಂತರ ಗ್ರಾನೈಟ್ ಲಾಬಿ, ಶಿಕ್ಷಣ ಲಾಬಿ ಬಂತು. ಈ ನಡುವೆ ಗಣಿಗಾರಿಕೆ ಲಾಬಿ ಇತ್ತು. ಈ ಎಲ್ಲಾ ಲಾಬಿಗಳು ಯಾವಾಗಲೂ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತವೆ. ಹಣದ ಬಲದೊಂದಿಗೆ ರಾಜ್ಯದ ರಾಜಕೀಯ ನಡೆಯುತ್ತದೆ ಎಂಬುದನ್ನು ಒಪ್ಪಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com