ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
Published: 13th October 2021 12:31 PM | Last Updated: 13th October 2021 02:57 PM | A+A A-

ಸುದ್ದಿಗೋಷ್ಠಿಗೆ ಮುನ್ನ ವೇದಿಕೆಯಲ್ಲಿ ಆಫ್ ದಿ ರೆಕಾರ್ಡ್ ಮಾತನಾಡಿಕೊಳ್ಳುತ್ತಿದ್ದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಮತ್ತು ವಿ ಎಸ್ ಉಗ್ರಪ್ಪ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಲೀಂ ಅವರು ಆಧಾರರಹಿತ ಆರೋಪ ಮಾಡಿದ್ದಾರೆ, ಅವರು ಹೇಳಿರುವುದರಲ್ಲಿ ಸತ್ಯಾಂಶವಿಲ್ಲ. ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ. ಉಗ್ರಪ್ಪನವರಲ್ಲಿ ವಿವರಣೆ ಕೇಳುತ್ತೇವೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯಾಗುವ @DKShivakumar ಅವರ ಕನಸಿಗೆ @INCKarnataka ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ.
ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ಬಪಕ್ಷೀಯರೇ ಷರಾ ಬರೆದುಬಿಟ್ಟಿದ್ದಾರೆ.
ಈ ಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ "ಡಿಕೆಶಿ ಪದಚ್ಯುತಿ" ಎಂಬ ಮಾಸ್ಟರ್ ಪ್ಲ್ಯಾನ್ನ ಭಾಗವೇ?#ಭ್ರಷ್ಟಾಧ್ಯಕ್ಷ pic.twitter.com/DE3bKSgYmZ— BJP Karnataka (@BJP4Karnataka) October 13, 2021
ಇನ್ನು ಟ್ವೀಟ್ ಮೂಲಕ ಬಿಜೆಪಿಯವರಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಅನಧಿಕೃತ ಮಾತುಗಳನ್ನು ಇಟ್ಟುಕೊಂಡು ರೊಟ್ಟಿ ನೆಕ್ಕುತ್ತಿರುವ ಬಿಜೆಪಿಯವರೇ ನಿಮ್ಮ ಪಕ್ಷದವರಾದ ಹೆಚ್ ವಿಶ್ವನಾಥ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಬಿ ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಗಳಿಗೆ ಮೊದಲು ಉತ್ತರಿಸಿ ಎಂದು ತಿರುಗೇಟು ಕೊಟ್ಟಿದೆ.
ಆಧಾರ ರಹಿತವಾಗಿ ಮಾತನಾಡಿದ್ದ ಸಲೀಂ ಅವರನ್ನು ಅಮಾನತು ಮಾಡಿದ್ದೇವೆ.
— Karnataka Congress (@INCKarnataka) October 13, 2021
ತಮ್ಮ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ಆರೋಪಗಳ ಸುರಿಮಳೆಗೈದ ಯತ್ನಾಳ್, ಹೆಚ್. ವಿಶ್ವನಾಥ್ ಅವರ ಮೇಲೆ @BJP4Karnataka ಕ್ರಮ ಕೈಗೊಳ್ಳುವ ಧೈರ್ಯ ತೋರುವುದೇ ಅಥವಾ ಅವರ ಆರೋಪಗಳನ್ನು ಒಪ್ಪಿಕೊಳ್ಳುವ ಪ್ರಾಮಾಣಿಕತೆ ತೋರುವುದೇ?#ಭ್ರಷ್ಟಬಿಜೆಪಿ