ಸಿಂದಗಿ, ಹಾನಗಲ್ ಉಪಚುನಾವಣೆ: ಅ.16 ನಂತರ ಬಿಜೆಪಿ ಪ್ರಮುಖರು ಸಚಿವರು ಪ್ರಚಾರದ ಕಣಕ್ಕೆ

ಈ ತಿಂಗಳ 16ರ ಬಳಿಕ ಎಲ್ಲಾ ಸಚಿವರೂ ಉಪಚುನಾವಣೆ ನಡೆಯುತ್ತಿರುವ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಈ ತಿಂಗಳ 16ರ ಬಳಿಕ ಎಲ್ಲಾ ಸಚಿವರೂ ಉಪಚುನಾವಣೆ ನಡೆಯುತ್ತಿರುವ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಉಪಚುನಾವಣೆಯ ಸಿದ್ಧತೆಗಳ ಕುರಿತು ಸಭೆ ನಡೆಸಿದರು. 

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್ ಅವರು, ಸಭೆಯಲ್ಲಿ ಉಪಚುನಾವಣೆ ಕುರಿತ ತಂತ್ರ ಮತ್ತು ಪ್ರವಾಸದ ವೇಳೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಉಪಚುನಾವಣೆ ಪ್ರಚಾರದಲ್ಲಿ ಸಂಸದರು ಹಾಗೂ ಶಾಸಕರು ಕೈಜೋಡಿಸಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರ ನಡೆಸಲಿದ್ದಾರೆ. ಉಪಚುನಾವಣೆ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ. 

ಉಪಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಸಚಿವರು, ಪ್ರತಿ ಶಕ್ತಿ ಕೇಂದ್ರಕ್ಕೆ ಶಾಸಕರು ಹಾಗೂ ಮತಗಟ್ಟೆಯಲ್ಲಿ ಪದಾಧಿಕಾರಿಗಳನ್ನು ಜೋಡಿಸಲಾಗಿದೆ. ಪ್ರವಾಸವನ್ನು ಯಾವುದೇ ಕಾರಣಕ್ಕೂ ಬದಿಗಿಡುವಂತಹ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 

ನಿಗಮ-ಮಂಡಳಿಗೆ ನೇಮಕ, ಸಚಿವ ಸಂಪುಟ ವಿಸ್ತರಣೆಯಂತಹ ಎಲ್ಲಾ ಕಾರ್ಯಗಳು ಉಪಚನಾವಣೆ ಬಳಿಕವೇ ನಡೆಯಲಿದೆ ಎಂದಿದ್ದಾರೆ.

ಇದೇ ವೇಳೆ ಐಟಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿ, ಇಲಾಖೆಯು ತನ್ನ ಕೆಲಸವನ್ನು ಮಾಡುತ್ತಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. 

ಬಿಜೆಪಿಯ ಸಿಎಂ ಉದಾಸಿ ಪ್ರತಿನಿಧಿಸಿದ್ದ ಹಾನಗಲ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸರ್ವ ಪ್ರಯತ್ನಗಳನ್ನು ಮಾಡುತ್ತಿವೆ,

ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಎದುರಾಗಿರುವ ಮೊದಲ ಚುನಾವಣೆ ಇದಾಗಿದ್ದು, ರಾಜ್ಯ ಬಿಜೆಪಿಗೆ ಈ ಚುನಾವಣೆ ಪ್ರಮುಖವಾಗಿದೆ. ಈ ನಡುವೆ ಬಂಡಾಯ ಅಭ್ಯರ್ಥಿಗಳೂ ಕೂಡ ನಾಮಪತ್ರ ಸಲ್ಲಿಸಿದ್ದು, ಬಿಜೆಪಿಯ ಕಳವಳಕ್ಕೆ ಕಾರಣವಾಗಿದೆ. 

ನಾಮಪತ್ರ ಹಿಂಪಡೆಯಲು ಬುಧವಾರ ಕೊನೆಯ ದಿನವಾಗಿದೆ. ನಾಯಕರ ಮನವೊಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com