ಬಿಎಸ್'ವೈ ಭೇಟಿ ಸಾಬೀತುಪಡಿಸಿ, ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಹೆಚ್'ಡಿಕೆಗೆ ಸಿದ್ಧರಾಮಯ್ಯ ಸವಾಲು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕದ್ದುಮುಚ್ಚಿ ಭೇಟಿಯಾಗುತ್ತಿದ್ದಾರೆಂಬ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕದ್ದುಮುಚ್ಚಿ ಭೇಟಿಯಾಗುತ್ತಿದ್ದಾರೆಂಬ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಅವರನ್ನು ಹುಟ್ಟುಹಬ್ಬದ ದಿನ ಬಿಟ್ಟರೆ ಬೇರಾವುದೇ ದಿನ ಭೇಟಿ ಮಾಡಿಲ್ಲ. ಅಧಿಕಾರದಲ್ಲಿರುವವರನ್ನು ವೈಯಕ್ತಿಕವಾಗಿ ನಾನು ಭೇಟಿ ಮಾಡಲ್ಲ. ಒಂದು ವೇಳೆ ಯಡಿಯೂರಪ್ಪ ಜೊತೆ ಕದ್ದುಮುಚ್ಚಿ ಭೇಟಿ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಸವಾಲು ಹಾಕಿದ್ದಾರೆ. 

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರು, ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ಗೆ ಕಾರಣ. ಸಿದ್ದರಾಮಯ್ಯ ಪವರ್‌ಗಾಗಿ ಏನು ಬೇಕಾದರೂ ಮಾಡುತ್ತಾರೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು ಸಹಾ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರ ಬೇಕು, ಯಡಿಯೂರಪ್ಪ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ಮಾಡಲಾಗಿದೆ. ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಅನುಮಾನ ಇಲ್ಲ ಎಂದಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com