ಹಾನಗಲ್-ಸಿಂದಗಿ ಉಪಚುನಾವಣೆ: ಇಂದಿನಿಂದ ಕಾಂಗ್ರೆಸ್ ಘಟಾನುಘಟಿ ನಾಯಕರ ಪ್ರಚಾರ

ಅಕ್ಟೋಬರ್ 30 ರಂದು ನಡೆಯುವ ಹಾನಗಲ್ -ಸಿಂದಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ವಿರೋಧ ಪಕ್ಷ ಕಾಂಗ್ರೆಸ್ ಎಲ್ಲಾ ರೀತಿಯ ರಣತಂತ್ರ ಹೂಡುತ್ತಿದೆ. 
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಅಕ್ಟೋಬರ್ 30 ರಂದು ನಡೆಯುವ ಹಾನಗಲ್ -ಸಿಂದಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ವಿರೋಧ ಪಕ್ಷ ಕಾಂಗ್ರೆಸ್ ಎಲ್ಲಾ ರೀತಿಯ ರಣತಂತ್ರ ಹೂಡುತ್ತಿದೆ. 

ಹಿರಿಯ ನಾಯಕರೊಂದಿಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರನ್ನು ಹಾನಗಲ್ ಉಪಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ, ಮಂಗಳವಾರ ರಣ್ ದೀಪ್ ಸಿಂಗ್ ಸುರ್ಜೇವಾಲಾ ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಮತ್ತು ಬುಧವಾರ ಹಾನಗಲ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಶನಿವಾರ ಸಿದ್ದರಾಮಯ್ಯ ಹಾನಗಲ್ ನಲ್ಲಿ ಮತ್ತು ಶಿವಕುಮಾರ್ ಸಿಂದಗಿ ಪ್ರಚಾರದಲ್ಲಿ ಪಾಲ್ಗೋಳ್ಳಲಿದ್ದಾರೆ, ಮುಂದಿನ ದಿನಗಳಲ್ಲಿ ಶಿವಕುಮಾರ್ ಎರಡು ಉಪ ಚುನಾವಣೆ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಒಂದು ವಾರದಿಂದ ಹಾನಗಲ್‌ನಲ್ಲಿ ಬೀಡುಬಿಟ್ಟಿರುವ ಸಲೀಂ, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಹೆಚ್ಚಿನ ಅಂತರದಿಂದ ಗೆಲ್ಲುತ್ತಾರೆ. ಹಿರಿಯ ನಾಯಕರು ಅಕ್ಟೋಬರ್ 27 ರವರೆಗೆ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಅವರು ಹೇಳಿದರು. ಜನರು ಬಿಜೆಪಿ ಸರ್ಕಾರದ ಬಗ್ಗೆ ಭ್ರಮನಿರಸನಗೊಂಡಿದ್ದಾರೆ ಮತ್ತು ಬದಲಾವಣೆಯನ್ನು ಬಯಸುತ್ತಾರೆ, ಏಕೆಂದರೆ ಇಂಧನ ಬೆಲೆಗಳು ತೀವ್ರವಾಗಿ ಹೆಚ್ಚಾಗಿದೆ ಮತ್ತು ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಚುನಾವಣೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವೈಫಲ್ಯಗಳು ಪ್ರಮುಖ ವಿಷಯಗಳಾಗಿವೆ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿಗೆ ಟಿಕೆಟ್ ನೀಡದ ಕಾರಣ, ಸ್ಥಳೀಯ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿರುವುದರಿಂದ ಕಾಂಗ್ರೆಸ್ ಗೆ ಲಾಭವಾಗಲಿದೆ ಎಂದು ಮೂಲಗಳು ಹೇಳಿವೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಬೊಮ್ಮಾಯಿ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com