ಉಪಚುನಾವಣೆಯಲ್ಲಿನ ಕಾಂಗ್ರೆಸ್ ಗೆಲುವು ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆಯಾಗಲಿದೆ: ಮಲ್ಲಿಕಾರ್ಜುನಾ ಖರ್ಗೆ

ಸಿಂದಗಿಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಎದುರಾಗಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ಪರ ಸೋಮವಾರ ಮೋರಟಗಿ ಗ್ರಾಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಕಾಂಗ್ರೆಸ್ ಪಕ್ಷದ ನಾಯಕರು ಪ್ರಚಾರ ನಡೆಸಿದರು.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ವಿಜಯಪುರ: ಸಿಂದಗಿಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಎದುರಾಗಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ಪರ ಸೋಮವಾರ ಮೋರಟಗಿ ಗ್ರಾಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಕಾಂಗ್ರೆಸ್ ಪಕ್ಷದ ನಾಯಕರು ಪ್ರಚಾರ ನಡೆಸಿದರು. 

ಪ್ರಚಾರದ ವೇಳೆ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆಯವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ಜನರು ಆಡಳಿತದ ಬಗ್ಗೆ ಅತೃಪ್ತಿ ಹೊಂದಿದ್ದಾರೆ ಎಂಬ ಸಂದೇಶವನ್ನು ನೀಡಲಿದೆ. ಉಪಚುನಾವಣೆ ಗೆದ್ದ ಕೂಡಲೇ ನಾವೇನು ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಆದರೆ, ಬಿಜೆಪಿಗೆ ಎದುರಾಗುವ ಸೋಲು ಪ್ರಧಾನಿ ಮೋದಿ ಹಾಗೂ ಅವರ ಸಹೋದ್ಯೋಗಿಗಳಿಗೆ ಸ್ಪಷ್ಟ ಸಂದೇಶ ರವಾನಿಸುತ್ತದೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವದ ವಿರುದ್ಧವಾಗಿ ಬಿಜೆಪಿ 6 ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಪಕ್ಷವು ಚುನಾಯಿತ ಶಾಸಕರನ್ನು ಸೆಳೆಯುವುದು ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳನ್ನು ಬಳಸಿಕೊಂಡು ಸರ್ಕಾರ ರಚನೆಗೆ ಬೆದರಿಕೆ ಹಾಕುವಂತಹ ಕಾನೂನುಬಾಹಿರ ತಂತ್ರಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. 

ಇದೇ ವೇಳೆ ಬಿಜೆಪಿಯ ಒಡಕು ರಾಜಕೀಯವನ್ನು ಟೀಕಿಸಿರುವ ಅವರು, ಧಾರ್ಮಿಕ ನಂಬಿಕೆಗಳ ಮೂಲಕವಲ್ಲದೆ, ಅಭಿವೃದ್ಧಿಯ ಆಧಾರದ ಮೇಲೆ ಮತ ಕೇಳುವಂತೆ ರಾಜಕೀಯ ಪಕ್ಷಗಳು, ಪ್ರಮುಖವಾಗಿ ಬಿಜೆಪಿಗೆ ಸವಾಲು ಹಾಕುತ್ತಿದ್ದೇನೆ. ಮತದಾನದ ಸಮಯದಲ್ಲಿ ಜಾತ್ಯತೀತ ಎಂದು ಹೇಳಿಕೊಳ್ಳುವ ಕೆಲವು ರಾಜಕೀಯ ಪಕ್ಷಗಳಿವೆ. ಒಮ್ಮೆ ಅಂತಹ ಪಕ್ಷವು ವಿಜಯಶಾಲಿಯಾಗಿ ಹೊರಹೊಮ್ಮಿದರೆ, ನಂತರ ಬಿಜೆಪಿಯಂತಹ ಕೋಮುವಾದಿ ಪಕ್ಷಗಳೊಂದಿಗೆ ಕೈಜೋಡಿಸುತ್ತದೆ. ಹಾಗಾಗಿ, ಅಂತಹ ಪಕ್ಷಗಳ ಬಗ್ಗೆ ಜನರು ಜಾಗೃತರಾಗಿರಬೇಕು ಎಂದು ಹೇಳಿದ್ದಾರೆ. 

ಈ ನಡುವೆ ಸಿದ್ದರಾಮಯ್ಯ ಅವರು ಮಾತನಾಡಿ, ಕೇಂದ್ರ ಸರ್ಕಾರದ ಬೆಲೆ ಏರಿಕೆ ಕ್ರಮದ ವಿರುದ್ಧ ತೀವ್ರವಾಗಿ ಕಿಡಿಕಾರಿದರು. 

ಅಡುಗೆ ಎಣ್ಣೆಯ ಬೆಲೆಗಳು ಗಗನಕ್ಕೇರಿರುವುದರಿಂದ ಯುವಕರು ಕೂಡ ಪಕೋಡಗಳನ್ನು ಮಾರಿ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಸಾಲವನ್ನು ರೂ.82 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ, ಆದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ಸಾಲ 000 ಕೋಟಿಗಿಂತ ಕಡಿಮೆ ಇತ್ತು. ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ರಾಜ್ಯದ ಜಿಎಸ್‌ಟಿ ಪಾಲನ್ನು ಕೇಳಲು ಹೆದರುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ತೋರುತ್ತಿದೆ. ರಾಜ್ಯ ಸರ್ಕಾರ ಇಡೀ ರಾಜ್ಯವನ್ನು ಕೇಸರಿಮಯಗೊಳಿಸಲು ಪ್ರಯತ್ನಗಳನ್ನು ಮಾಡುತ್ತಿದೆ. ಪೊಲೀಸರು ಕೇಸರಿ ಬಟ್ಟೆಗಳನ್ನು ಧರಿಸಿ ಆಯುಧ ಪೂಜೆಯನ್ನು ಆಚರಿಸುತ್ತಿರುವುದು ಕಂಡುಬಂದಿತು. ಜನರು ಹಣ ಮತ್ತು ಧಾರ್ಮಿಕ ಉದ್ದೇಶಗಳಿಗಾಗಿ ಮತ ಹಾಕಬಾರದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com