ಡಿಕೆಶಿ, ಸಿದ್ದರಾಮಯ್ಯ ಜೋಡೆತ್ತಲ್ಲ; ಕಾಡೆತ್ತು- ಬಿಜೆಪಿ ಟೀಕೆ

ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಟ್ವೀಟರ್ ವಾರ್ ಜೋರಾಗಿ ಸದ್ದು ಮಾಡುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ’ ಎಂದು ರಾಜ್ಯ ಕಾಂಗ್ರೆಸ್ ಮಾಡಿದ್ದ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿತ್ತಲ್ಲದೇ, ಈ ಹೇಳಿಕೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
ಡಿಕೆ ಶಿವಕುಮಾರ್, ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಟ್ವೀಟರ್ ವಾರ್ ಜೋರಾಗಿ ಸದ್ದು ಮಾಡುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ’ ಎಂದು ರಾಜ್ಯ ಕಾಂಗ್ರೆಸ್ ಮಾಡಿದ್ದ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿತ್ತಲ್ಲದೇ, ಈ ಹೇಳಿಕೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಇದೀಗ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತಲ್ಲ, ಅವರು ಕಾಡೆತ್ತು ಎಂದು ಬಿಜೆಪಿ ಟೀಕಿಸಿದೆ. ಈ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಒಬ್ಬರಿಗೊಬ್ಬರು ಕಾದಾಟ ಮಾಡುತ್ತಿದ್ದಾರೆ.  ಕಾಂಗ್ರೆಸ್‌ ಕಚೇರಿಯಲ್ಲಿ ಪರ್ಸಂಟೇಜ್‌ ಸಂವಾದ ಮಾಡಿರುವ ಉಗ್ರಪ್ಪ, ಜೀವಮಾನದಲ್ಲಿಯೇ ಪಿಸುಮಾತು ಆಡಿದವರಲ್ಲ, ಉಗ್ರವಾಗಿಯೇ ಮಾತನಾಡುವವರು. ಈ ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದು ಆರೋಪಿಸಲಾಗಿದೆ. 

ಕಾಂಗ್ರೆಸ್ ಪಕ್ಷ ಸಂವಿಧಾನದ ಮೇಲೆ ನಂಬಿಕೆ ಕಳೆದುಕೊಂಡಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಡುವೆಯೇ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆ ವೇಳೆಗೆ ಎರಡು ಹೋಳಾಗಿರುತ್ತದೆ. ಜೆಡಿಎಸ್ ಪಕ್ಷ ಕುಟುಂಬ ರಾಜಕಾರಣ ಮಾಡುತ್ತಿದೆ. ಹೀಗಾಗಿ ಮುಂದಿನ ಚುನಾವಣೆಗೆ ಈ ಎರಡು ಪಕ್ಷಗಳು ಸೋಲು ಕಾಣಲಿವೆ ಎಂದು ಬಿಜೆಪಿ ಹೇಳಿದೆ. 

ದೇಶದ ಪ್ರಧಾನಿ ʼಸಬ್ ಕಾ ಸಾಥ್ ಸಬ್ ಕಾ ವಿಕಾಸ್ʼ ಅಂದ್ರೆ, ಸಿದ್ದರಾಮಯ್ಯ ಅವರು ʼಸಾಬ್ರು ಕಾ ಸಾಥ್ ಸಾಬ್ರು ಕಾ ವಿಕಾಸ್ʼ ಎನ್ನುತ್ತಿದ್ದಾರೆ.  ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com