'ಕುಲವಂ ನಾಲಗೆ ನುಡಿಯಿತು' ಎಂಬಂತೆ ಕಟೀಲ್‌ರವರ ಸಂಸ್ಕಾರ ಮತ್ತು ಸಂಸ್ಕೃತಿ'

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ಸ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಾಯಕರು ತಿರುಗಿಬಿದ್ದಿದ್ದಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ಸ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಾಯಕರು ತಿರುಗಿಬಿದ್ದಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ನಳಿನ್ ಕುಮಾರ್ ಹೇಳಿಕೆಯನ್ನು ಟೀಕಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಟೀಲ್‌ರವರು ಬಿಜೆಪಿಯಂತಹ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಭ್ಯತೆಯಿಂದ ಮಾತನಾಡುವ ಸಂಸ್ಕೃತಿ ಕಲಿಯಲಿ. ಇಲ್ಲವೇ ಈ ರೀತಿ ಮಾತನಾಡುವುದು ಆರ್ ಎಸ್ ಎಸ್ ಕಲಿಸಿದ ಸಂಸ್ಕಾರ ಎಂದು ಬಹಿರಂಗವಾಗಿ ಒಪ್ಪಿಕೊಳ್ಳಲಿ. ಕುಲವಂ ನಾಲಗೆ ನುಡಿಯಿತು ಎಂಬಂತೆ ಕಟೀಲ್‌ರವರ ಸಂಸ್ಕಾರ ಮತ್ತು ಸಂಸ್ಕೃತಿಯೇನು ಎಂಬುದು ಅವರ ಮಾತಿನಿಂದಲೇ ತಿಳಿಯುತ್ತದೆ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಹಾಗೂ ಸಂಸದರಾಗಿ ರಾಹುಲ್ ಗಾಂಧಿಯವರ ಬಗ್ಗೆ ಅತ್ಯಂತ ಕೀಳುಮಟ್ಟದ ಹಾಗೂ ಆಧಾರರಹಿತ ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ಕಟೀಲ್‌ರವರ ಕೊಳಕು‌ ಮನಃಸ್ಥಿತಿಯನ್ನು ಅನಾವರಣ ಮಾಡಿದೆ.  ಸಂಸ್ಕೃತಿ ಮತ್ತು ದೇವರ ಬಗ್ಗೆ ಮಾತನಾಡುವ ಬಿಜೆಪಿಯವರ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿವೆ. ಆ ಬಗ್ಗೆ ಕ್ರಮವೇನು? ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡಲು ಕಟೀಲ್‌ರವರಿಗೆ ಯಾವ ನೈತಿಕತೆಯಿದೆ.  ರಾಜೀವ್‌ ಗಾಂಧಿ, ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಹೆಗ್ಗಳಿಕೆ ನೆಹರೂ ಕುಟುಂಬದವರದ್ದು. ದೇಶಕ್ಕಾಗಿ ಬಿಜೆಪಿಯವರ ತ್ಯಾಗವೇನು.? ಕಟೀಲ್‌ರವರ ಕೊಡುಗೆಯೇನು.? ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಬಿಜೆಪಿಯವರಿಗೆ ಸಂಸ್ಕಾರದ ಗಂಧ ಗಾಳಿ ಗೊತ್ತಿದ್ದರೆ, ಹಾಗೂ ಸಾರ್ವಜನಿಕ ಭಾಷಾ ಪ್ರಯೋಗದ ಅರಿವಿದ್ದರೆ, ಅವಿವೇಕತನದ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಕಟೀಲ್ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಕಟೀಲ್‌ರಂತಹ ಶುದ್ಧ ಅಜ್ಞಾನಿಗಳಿಗೆ ಅಧ್ಯಕ್ಷ ಪಟ್ಟ ಕೊಟ್ಟ ತಮ್ಮ ಅಜ್ಞಾನವನ್ನು ಬಿಜೆಪಿಯವರು ಇನ್ನಾದರೂ ತಿದ್ದಿಕೊಳ್ಳಲಿ. ಇದು ಬಿಜೆಪಿಯ ನೈತಿಕತೆಯ ಪ್ರಶ್ನೆಯಾಗಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com