ಸೊರಬ: ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ, ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ. ಹಾಗಾಗಿ ಗೆಲುವು ನಮ್ಮದೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಇಂದು ಬೆಳಗ್ಗೆ ಮಾತನಾಡಿದ ಅವರು, ಬಿಜೆಪಿ ಸತತವಾಗಿ ಜನಪರ ಕೆಲಸಗಳಲ್ಲಿ ವಿಫಲವಾಗುತ್ತಾ ಬಂದಿದೆ. ಅದು ಕೇಂದ್ರದ ಮೋದಿ ಸರ್ಕಾರವಾಗಲಿ, ಇಲ್ಲಿ ರಾಜ್ಯದಲ್ಲಾಗಲಿ ಬೆಲೆ ಏರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸತತ ವೈಫಲ್ಯ ಕಾಣುತ್ತಾ ಬಂದಿದೆ. ಮೋದಿಯವರು ಸುಳ್ಳಿನ ಮೂಲಕ ಜನರಲ್ಲಿ ಭ್ರಮೆಯನ್ನು ಸೃಷ್ಟಿಸಿದ್ದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಜನರಿಗೆ ಬಿಜೆಪಿಯ ನಿಜರೂಪ ಗೊತ್ತಾಗುತ್ತಿದೆ ಎಂದು ಟೀಕಿಸಿದರು.
ನಮ್ಮ ಸರ್ಕಾರವಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳ ಬಗ್ಗೆ ಜನ ಈಗಲೂ ಮಾತನಾಡುತ್ತಿದ್ದಾರೆ, ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಜನ ನೆನಪು ಮಾಡಿಕೊಳ್ಳುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ನಮ್ಮ ಪಕ್ಷಕ್ಕೆ ವರವಾಗಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೈಗೆ ಗೆಲುವು ಖಚಿತ ಎಂದರು.
Advertisement