'ಕಾಂಗ್ರೆಸ್ ಭವಿಷ್ಯ ರೂಪಿಸುತ್ತೆ, ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರೆ ಉತ್ತಮ ಅವಕಾಶಗಳು ಸಿಗುತ್ತವೆ'

ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿ ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ಈಗ ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಸೊರಬ: ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿ ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ಈಗ ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭೆ ಕ್ಷೇತ್ರದ ಕುಬಟೂರಿನಲ್ಲಿ ಮಾತನಾಡಿದ ಅವರು, ಬಂಗಾರಪ್ಪ ಅವರು ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಆದವರು. ನಾನು ಕಾಂಗ್ರೆಸ್ ಸೇರುವಾಗಲೂ ಇದೇ ಪ್ರಶ್ನೆ ಕೇಳಿದ್ದೆ, ಕೊನೆಗೆ ನಾನು ಮುಖ್ಯಮಂತ್ರಿ ಆಗಿಲ್ಲವೇ? ಕಾಂಗ್ರೆಸ್ ಪಕ್ಷ ಭವಿಷ್ಯ ರೂಪಿಸುತ್ತೆ, ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರೆ ಉತ್ತಮ ಅವಕಾಶಗಳು ತಾನಾಗಿಯೇ ಸಿಗುತ್ತವೆ ಎಂದು ಹೇಳಿದರು.

ಮೊದಲು ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ ಇತ್ತು, ಈಗ ಬೇರೆ ಬೇರೆ ಜಾತಿಗಳಿಗೆ ಒಂದೊಂದು ಅಭಿವೃದ್ಧಿ ನಿಗಮ ಆಗಿದೆ. 

ಯಾವುದೇ ಅಭಿವೃದ್ಧಿ ನಿಗಮ ಮಾಡೋದು ದೊಡ್ಡ ವಿಚಾರವಲ್ಲ, ಆ ಸಮುದಾಯದ ಅಭಿವೃದ್ಧಿಗೆ ಸಾಕಾಗುವಷ್ಟು ಅನುದಾನ ಕೊಡಬೇಕು. ಲಿಂಗಾಯತ ಮತ್ತು ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ರು, ಇದಕ್ಕೆ ನನ್ನ ವಿರೋಧವಿಲ್ಲ. ಆದರೆ ಈ ಎರಡು ನಿಗಮಗಳಿಗೆ ತಲಾ 500 ಕೋಟಿ ರೂಪಾಯಿ ನೀಡಿದರು, ಉಳಿದ ಎಲ್ಲಾ ನಿಗಮಗಳಿಗೆ ಸೇರಿ 500 ಕೋಟಿ ಅನುದಾನ ನೀಡಿಲ್ಲ. ಹೀಗಾದ್ರೆ ನಿಗಮ ಸ್ಥಾಪನೆಯಾಗಿಯೂ ಉಪಯೋಗವಿಲ್ಲ ಎಂದು ಅಭಿಪ್ರಾಯಪಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com