ಸರ್ಕಾರಿ ಕೆಲಸ ಯಾವುದೂ ನಿಂತಿಲ್ಲ: ಕಾಂಗ್ರೆಸ್ ಆರೋಪಕ್ಕೆ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಯಾವುದೇ ಕೆಲಸಗಳೂ ನಿಂತಿಲ್ಲ. ಎಲ್ಲವೂ ಎಂದಿನಂತೆ ಮುನ್ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ವಿಜಯಪುರ: ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಯಾವುದೇ ಕೆಲಸಗಳೂ ನಿಂತಿಲ್ಲ. ಎಲ್ಲವೂ ಎಂದಿನಂತೆ ಮುನ್ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧಕ್ಕೆ ಬೀಗ ಜಡಿದು ಸಚಿವರೆಲ್ಲಾ ಪ್ರಚಾರಕ್ಕೆ ಬಂದಿದ್ದಾರೆ ಎಂಬ ಕಾಂಗ್ರೆಸ್ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅವರು, ಅವರು ಹಿಂದೆ ಏನೆಲ್ಲಾ ಮಾಡಿದ್ದಾರೆ ಎಂಬುದು ನಮಗೂ ಗೊತ್ತಿದೆ. ನಾನು ಸಚಿವರಿಗೆ ಏನು ಸೂಚನೆ ಕೊಡಬೇಕೋ ಕೊಟ್ಟಿದೇನೆ. ಯಾವುದೇ ಕೆಲಸಗಳು ನಿಂತಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಪ್ರಾದೇಶಿಕ ಪಕ್ಷವನ್ನು ಬಿಜೆಪಿ, ಕಾಂಗ್ರೆಸ್ ಮುಗಿಸುತ್ತವೆ ಎಂಬ ದೇವೇಗೌಡರ ಹೇಳಿಕೆಗೂ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಜೆಡಿಎಸ್ ಅನ್ನು ಮುಗಿಸುವ ಪ್ರಶ್ನೆ ಇಲ್ಲ, ನಮ್ಮ ಪಕ್ಷದ ಸಂಘಟನೆ ಮಾತ್ರ ನಾವು ಮಾಡುತ್ತಿದ್ದೇವೆ. ಇನ್ನೊಂದು ಪಕ್ಷದ ಕಡೆಗೆ ನಾವು ತಿರುಗಿಯೂ ನೋಡುವುದಿಲ್ಲ ಎಂದು ತಿಳಿಸಿದರು.

ಬಳಿಕ ಜೆಡಿಎಸ್ ಪರವಾಗಿ ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ ಎಂಬ ಜಮೀರ್ ಆರೋಪವನ್ನು ತಳ್ಳಿ ಹಾಕಿದರು. ಇದು ವಿಪರೀತ ಕಲ್ಪನೆ ಅಷ್ಟೆ, ಅದಕ್ಕೆ ಯಾವುದು ಆಧಾರವಿಲ್ಲ ಎಂದರು.

ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಸರ್ಕಾರ ತಮ್ಮ ಇಡೀ ಮಂತ್ರಿ ಮಂಡಲವನ್ನೇ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಸಿದೆ. ಆಡಳಿತದ ಶಕ್ತಿಕೇಂದ್ರವಾದ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಸಚಿವರು ಇಲ್ಲದೆ ಭಣಗುಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com