ಸಿದ್ದರಾಮಯ್ಯರಿಂದ ಜಾತಿಗೊಂದು ಸಮಾವೇಶ; ನಾನು ಕುರಿಮಂದೆಯಲ್ಲಿ ಮಲಗಿ, ಊಟ ಮಾಡಿದ್ದೇನೆ: ಎಚ್ ಡಿಕೆ

ಜೆಡಿಎಸ್ ಅನ್ನು ಜಾತಿ ಪಕ್ಷ ಎಂದು ಅಪಪ್ರಚಾರ ಮಾಡುವ ಸಿದ್ದರಾಮಯ್ಯ ಸಿಂಧಗಿಯಲ್ಲಿ ಕುಳಿತು, ಚುನಾವಣೆ ಗೆಲುವಿಗಾಗಿ ಜಾತಿಗೊಂದು ಸಮಾವೇಶ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಮೈಸೂರು:  ಜೆಡಿಎಸ್ ಅನ್ನು ಜಾತಿ ಪಕ್ಷ ಎಂದು ಅಪಪ್ರಚಾರ ಮಾಡುವ ಸಿದ್ದರಾಮಯ್ಯ ಸಿಂಧಗಿಯಲ್ಲಿ ಕುಳಿತು, ಚುನಾವಣೆ ಗೆಲುವಿಗಾಗಿ ಜಾತಿಗೊಂದು ಸಮಾವೇಶ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

ಮೈಸೂರಿನಲ್ಲಿಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಿದ್ದರಾಮಯ್ಯ ಕುರುಬರಿಗೊಂದು ಪ್ರತ್ಯೇಕ ಸಮಾವೇಶ, ತಳವಾರ ಸಮಾಜಕ್ಕೊಂದು ಪ್ರತ್ಯೇಕ ಸಮಾವೇಶ, ಕೋಳಿ ಸಮಾಜಕ್ಕೊಂದು ಪ್ರತ್ಯೇಕ ಸಮಾವೇಶ ಮಾಡಿದ್ದಾರೆ. ಇದು ಯಾವ ಸೀಮೆಯ ಜಾತ್ಯಾತೀತತೆ? ಬಾಯಲ್ಲಿ ಮಾತ್ರ ಜಾತ್ಯತೀತ, ಆದರೆ ಒಳಗೆಲ್ಲ ಬರೀ ಜಾತಿವಾದ, ಜಾತಿ-ಜಾತಿಗಳ ನಡವೆ ಕಂದಕ ಸೃಷ್ಟಿ ಮಾಡುತ್ತಿರುವುದೇ ಸಿದ್ದರಾಮಯ್ಯ ಎಂದು ನೇರ ಆರೋಪಮಾಡಿದರು.

ತಾವು ಗಾಜಿನ ಮನೆಯಲ್ಲಿ ಕೂತು ಇನ್ನೊಬ್ಬರ ಮನೆಯ ಮೇಲೆ ಕಲ್ಲು ಹೊಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಬೇರೆಯವರಿಗೆ ಉಪದೇಶ ಮಾಡುವ ಮುನ್ನ ಅವರು ತಮ್ಮ ನಡವಳಿಕೆಯ ಬಗ್ಗೆ ಜನರಿಗೆ ಸ್ಪಷ್ಟವಾಗಿ ಹೇಳಬೇಕು. ಒಂದು ಕಡೆ ಜಾತಿ ಹೋಗಬೇಕು ಎಂದು ಹೇಳುತ್ತಾ ಮತ್ತೊಂದು ಕಡೆ ಜಾತಿ ಸಮಾವೇಶಗಳನ್ನು ಯಾಕೆ ಮಾಡುತ್ತಾರೆ ಇದು ಯಾವ ಸಂದೇಶ ಕೊಡಲಿದೆ ಎಂದು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಯಾವ ಕುರಿ ಕಾಯ್ದವರೇ ಎಂದು ಲಘುವಾಗಿ ಮಾತನಾಡಿದ್ದಾರೆ ಇವರೊಬ್ಬರೇನಾ ಕುರಿ ಕಾಯ್ದವರು? ನಾವು ಕೂಡ ಕುರಿ ಸಾಕುತ್ತಿದ್ದೇವೆ ಬೇಕಾದರೆ ಬಿಡದಿ ತೋಟಕ್ಕೆ ಬಂದು ನೋಡಲಿ ಎಂದು ನೇರ ಸವಾಲು ಹಾಕಿದರು.

ಮುಖ್ಯಮಂತ್ರಿ ಬೊಮ್ಮಾಯಿ ಯಾವ ಕುರಿ ಕಾಯ್ದವರೇ ಎಂದು ಲಘುವಾಗಿ ಮಾತನಾಡಿದ್ದಾರೆ ಸಿದ್ದರಾಮಯ್ಯ. ಇವರೊಬ್ಬರೇನಾ ಕುರಿ ಕಾಯ್ದವರು? ಚಿಕ್ಕ ಮಕ್ಕಳಿದ್ದಾಗ ನಾವು ಕುರಿ ಮಂದೆಯಲ್ಲೇ ಊಟ ಮಾಡಿ ಅಲ್ಲೇ ಮಲಗ್ತಿದ್ದೆವು. ನಾವು ಕೂಡ ಕುರಿ ಸಾಕಿದ್ದೇವೆ, ಈಗಲೂ ಸಾಕುತ್ತಿದ್ದೇವೆ. ಬೇಕಾದರೆ ಬಿಡದಿ ತೋಟಕ್ಕೆ ಬಂದು ನೋಡಲಿ. ಕುರಿ ಸಾಕಣೆ ಮಾಡಿದವರು ಸಿದ್ದರಾಮಯ್ಯ ಒಬ್ಬರೇ ಅಲ್ಲ ಎಂದು ಪ್ರತಿಪಕ್ಷ ನಾಯಕನಿಗೆ ಕುಮಾರಸ್ವಾಮಿ ತಿರುಗೇಟು ನೀಡಿದರು.

ಮೊನ್ನೆ ಹಾನಗಲ್ʼನಲ್ಲಿ ಭಾಷಣ ಮಾಡುತ್ತಿದ್ದರು ಇದೇ ಮಹಾನುಭಾವರು. ಕುಮಾರಸ್ವಾಮಿ ನೇಗಿಲು ಹಿಡಿದವ್ನಾ? ಕೃಷಿ ಮಾಡವ್ನಾ? ಕೂಲಿ ಮಾಡವ್ನಾ? ಅವನಿಗೇನು ಗೊತ್ತು ಕೃಷಿ? ಎಂದು ಕೇವಲವಾಗಿ ಮಾತನಾಡಿದ್ದಾರೆ. ನಾನು ಯಾವ ರೀತಿ ಕೃಷಿ ಮಾಡುತ್ತಿದ್ದೇನೆ ಎನ್ನುವುದನ್ನು ಅವರು ನನ್ನ ತೋಟಕ್ಕೇ ಬಂದು ನೋಡಲಿ. ಸಿದ್ದರಾಮಯ್ಯ ಏನ್ಮಾಡಿದ್ದಾರೆ? ಅವರದ್ದು ತೋಟ ಇರಬೇಕಲ್ಲಾ? ಏನೇನು ಮಾಡಿದ್ದಾರೋ ಹೇಳಲಿ. ನಾವು ಕೂಲಿಯನ್ನೂ ಮಾಡಿದ್ದೇವೆ, ನೇಗಿಲನ್ನೂ ಹಿಡಿದಿದ್ದೇವೆ, ತಲೆಯ ಮೇಲೆ ಗೊಬ್ಬರವನ್ನೂ ಹೊತ್ತಿದ್ದೇವೆ. ಇವರೊಬ್ಬರೇ ಅಲ್ಲ ಎಂದು ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com