ಹಾನಗಲ್ ನಲ್ಲಿ ಬೊಮ್ಮಾಯಿ, ಶ್ರೀನಿವಾಸ್ ಮಾನೆ ನಡುವೆ ಸ್ಪರ್ಧೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಇಲ್ಲ ಎಂದು ಬಿಜೆಪಿ ಹೇಳುತ್ತಿದೆ. ಆದರೆ, ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಡುವಣ ಸ್ಪರ್ಧೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋಮವಾರ ಹೇಳಿದರು.
ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಶೇಕಡಾ 200 ರಷ್ಟು ಭರವಸೆ ನೀಡುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಬೇರೊಂದು ಪಕ್ಷಕ್ಕೆ ಸಹಾಯ ಪಕ್ಷ ಪಕ್ಷ ತೆರೆಮರೆಯಲ್ಲಿ ಕೆಲಸ ಮಾಡುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜಿವಾಲಾ ಹೇಳುವ ಮೂಲಕ ಜೆಡಿಎಸ್ ಪಕ್ಷವನ್ನು ಪ್ರಸ್ತಾಪಿಸಿದರು. ಹಾನಗಲ್ ಹಾಗೂ ಸಿಂಧಗಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ ಎಂದು ಅವರು ಆರೋಪಿಸಿದರು.
ಉಪ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಗೆದ್ದಿದೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಬಿಜೆಪಿ ಅಧಿಕಾರದಲ್ಲಿರುವುದರಿಂದ ಮುಖ್ಯಮಂತ್ರಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಒಂದು ಅಥವಾ ಎರಡು ಬಾರಿ ಸಿಎಂ ಪ್ರಚಾರ ಮಾಡುವುದು ಸಾಮಾನ್ಯ.ಆದರೆ, ಬೊಮ್ಮಾಯಿ ತಾವೇ ಸ್ವತ: ಅಲ್ಲಿ ಅಬ್ಬರದ ಪ್ರಚಾರಕ್ಕೆ ಇಳಿದಿರುವುದನ್ನು ನೋಡಿದರೆ, ಫಲಿತಾಂಶದ ಬಗ್ಗೆ ಅವರಿಗೆ ಎಷ್ಟೊಂದು ಭಯವಿರಬೇಕು ಎಂಬುದನ್ನು ತೋರಿಸುತ್ತದೆ ಎಂದರು.


