ಇನ್ನೂ ಮೂರು ದಿನಗಳ ಉಪ ಚುನಾವಣೆ ಪ್ರಚಾರದಲ್ಲಿ ಹಣದ ಹರಿವು ಸಾಧ್ಯತೆ, ದೇವೇಗೌಡ ಆತಂಕ

ಸಿಂಧಗಿ ವಿಧಾನಸಭಾ ಉಪ ಚುನಾವಣೆ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿಯಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಭಾರೀ ಪ್ರಮಾಣದ ಹಣ ಹರಿದಾಡುವ ಶಂಕೆಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ .ಡಿ. ದೇವೇಗೌಡ ವ್ಯಕ್ತಪಡಿಸಿದ್ದಾರೆ.
ಹೆಚ್.ಡಿ. ದೇವೇಗೌಡ
ಹೆಚ್.ಡಿ. ದೇವೇಗೌಡ

ತುಮಕೂರು: ಸಿಂಧಗಿ ವಿಧಾನಸಭಾ ಉಪ ಚುನಾವಣೆ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿಯಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಭಾರೀ ಪ್ರಮಾಣದ ಹಣ ಹರಿದಾಡುವ ಶಂಕೆಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ .ಡಿ. ದೇವೇಗೌಡ ವ್ಯಕ್ತಪಡಿಸಿದ್ದಾರೆ. ಇದು ಜೆಡಿಎಸ್ ಅಭ್ಯರ್ಥಿಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ. ಅಕ್ಟೋಬರ್ 30 ರಂದು ಸಿಂಧಗಿ ಹಾಗೂ ಹಾನಗಲ್ ಉಪ ಚುನಾವಣೆ ನಡೆಯಲಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ದೇವೇಗೌಡ, ತಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾತನಾಡಿದ್ದ  ನೀರಾವರಿ ಯೋಜನೆಗಳ ಬಗ್ಗೆ ಮಾತನಾಡಲು ಆರಂಭಿಸಿದ್ದು, ಜೆಡಿಎಸ್ ಅಭ್ಯರ್ಥಿ ನಜಿಯಾ ಶಕೀಲ್ ಅಹಮದ್ ಅಂಗಡಿಗೆ ಗೆಲ್ಲುವ ಉತ್ತಮ ಅವಕಾಶವಿದೆ ಎಂದರು. ಲೋಕೋಪಯೋಗಿ ಸಚಿವರಾಗಿ ವಿಜಯಪುರದ ಕೃಷ್ಣಾ ನದಿಗೆ ಅಡ್ಡಲಾಗಿ 845 ಬ್ರಿಡ್ಜ್ ಗಳನ್ನು ನಿರ್ಮಾಣ ಮಾಡುವಲ್ಲಿ ತಾವು ಪ್ರಮುಖ ಪಾತ್ರ ವಹಿಸಿರುವುದಾಗಿ ತಿಳಿಸಿದರು.

ಬಿಜೆಪಿ ಹಾಗೂ ಕಾಂಗ್ರೆಸ್ ನಂತೆ ಜೆಡಿಎಸ್ ಗೆ ಹಣದ ಬೆಂಬಲವಿಲ್ಲ. 25 ಪ್ರಮುಖ ಹಳ್ಳಿಗಳಲ್ಲಿ ನಾನು ಪ್ರಚಾರ ನಡೆಸಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಕ್ಟೋಬರ್ 27ರವರೆಗೂ ಅಲ್ಲಿರುತ್ತೇನೆ. ಇನ್ನೂ ಮೂರು ದಿನಗಳಲ್ಲಿ ಏನು ನಡೆಯಲಿದೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಉತ್ತರ ಕರ್ನಾಟಕದಲ್ಲಿ ನಮಗೆ ನೆಲೆ ಇಲ್ಲ ಎಂದು ವಿರೋಧಿಗಳು ಹೇಳಬಹುದು. ಆದರೆ, ಕಾಂಗ್ರೆಸ್ ಏಕೆ ದಿವಂಗತ ಎಂ. ಸಿ. ಮನಗೂಳಿ ಅವರ ಮಗನನ್ನು ಪಕ್ಷಕ್ಕೆ ಸೇರಿಸಿಕೊಂಡಿತು ಎಂದು ಪ್ರಶ್ನಿಸಿದ ದೇವೇಗೌಡ, ದೇಶಾದ್ಯಂತ ಬೆಳವಣಿಗೆಯನ್ನು ಗಮನಿಸಿದರೆ ವಿಶೇಷವಾಗಿ ಪಂಜಾಬ್ ನಲ್ಲಿ ಕಾಂಗ್ರೆಸ್ ಕ್ಷೀಣಿಸುತ್ತಿದೆ. ಒಂದು ವೇಳೆ ಜೆಡಿಎಸ್ ನಾಯಕರು ಒಟ್ಟಾದರೇ, ರಾಜ್ಯದಲ್ಲಿ ದೊಡ್ಡ ಪ್ರಬಲ ಪಕ್ಷವಾಗಿ ಬೆಳೆಯಬಹುದು ಎಂದರು.

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಪಕ್ಷ ತೊರೆಯದ ಸುಳಿವನ್ನು ನೀಡಿದ ದೇವೇಗೌಡ,  ಜಿ. ಟಿ. ದೇವೇಗೌಡರ ಪುತ್ರ ಹರೀಶ್ ಗೆ ರಾಜಕೀಯದಲ್ಲಿ ಒಳ್ಳೆಯ ಅವಕಾಶಗಳಿವೆ. ಒಂದು ವೇಳೆ ತಪ್ಪುಗಳು ಆಗಿದ್ದಲ್ಲಿ, ಅವುಗಳನ್ನು ಸರಿಪಡಿಸಿಕೊಂಡು ಮುಂದುವರೆಯುತ್ತೇವೆ ಎಂದರು.

ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವಿವಿಧ ಪಕ್ಷಗಳಿಂದ ಮಾತಿನ ಚಕಮಕಿ ಬಗ್ಗೆ ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದರು. ಅಗ್ಗದ ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ರಾಜಕೀಯತೆ ತನ್ನ ಪಾವಿತ್ರತೆ ಕಳೆದುಕೊಳ್ಳುತ್ತಿದೆ. ಉಪ ಚುನಾವಣೆ ಫಲಿತಾಂಶ ಕಾಂಗ್ರೆಸ್ ಮೇಲೆ ಪರಿಣಾಮ ಬೀರಲಿದೆ ಎಂದು  ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com