ರಾಜ್ಯ, ಕೇಂದ್ರ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ: ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ

ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಆಡಳಿತ ಪಕ್ಷದ ಇಬ್ಬರು ಪ್ರಭಾವಿ ನಾಯಕರ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿರುವುದರಿಂದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರದ ಭವಿಷ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ
ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ

ಬೆಂಗಳೂರು: ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಆಡಳಿತ ಪಕ್ಷದ ಇಬ್ಬರು ಪ್ರಭಾವಿ ನಾಯಕರ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿರುವುದರಿಂದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರದ ಭವಿಷ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿ ಬಳಿಕ ಸಿಸಿಬಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಿತ್ತು. ಇದೀಗ ಮತ್ತಷ್ಟು ಜನರ ತಲೆದಂಡವಾಗಬಹುದು ಎಂದು ಹೇಳಿದ್ದಾರೆ.

ವಿರೋಧ ಪಕ್ಷವಾಗಿ ನಾವು ಹಗರಣ ಸಂಬಂಧ ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ. ರಾಜ್ಯ ಮತ್ತು ಕೇಂದ್ರೀಯ ಸಂಸ್ಥೆಗಳ ಮೇಲೆ ನಮಗೆ ನಂಬಿಕೆಯಿಲ್ಲ. ನ್ಯಾಯಾಲಯ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿದ್ದೇ ಆದರೆ, ಸತ್ಯಾ ಸತ್ಯತೆಗಳು ಬಹಿರಂಗಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಮಾಜಿ ಗೃಹ ಸಚಿವನಾಗಿದ್ದ ನನಗೂ ಹಗರಣದ ಬಗ್ಗೆ ಮಾಹಿತಿ ಇದೆ. ಸತ್ಯಾಂಶಗಳು ಬಹಿರಂಗೊಳ್ಳಬೇಕು. ಬೊಮ್ಮಾಯಿ ಸರ್ಕಾರದ ತಲೆ ಅಲ್ಲದೇ ಹೋದರು, ಕೆಲ ಬಿಜೆಪಿ ನಾಯಕರ ತಲೆದಂಡವಂತೂ ಆಗಲಿದೆ ಎಂದಿದ್ದಾರೆ.

ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಸಾಕಷ್ಟು ಪ್ರಭಾವಿ ವ್ಯಕ್ತಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ. ರಾಜಕೀಯ ನಾಯಕರು, ಉದ್ಯಮಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಕುರಿತ ಮಾಹಿತಿ ನನಗೆ ಸಾಕಷ್ಟು ಆಘಾತವನ್ನೇ ತಂದಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com