ಮೇಕೆದಾಟು, ಕಾವೇರಿ ವಿವಾದ: ಮಧ್ಯಪ್ರವೇಶಿಸುವಂತೆ ಕೇಂದ್ರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಮೇಕೆದಾಟು ಹಾಗೂ ಕಾವೇರಿ ನದಿ ನೀರು ವಿವಾದ ಸಂಬಂಧ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಆಗ್ರಹಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಮೇಕೆದಾಟು ಹಾಗೂ ಕಾವೇರಿ ನದಿ ನೀರು ವಿವಾದ ಸಂಬಂಧ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಆದೇಶ ಹಾಗೂ ಮೇಕೆದಾಟು ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 

ಕಾವೇರಿ ನದಿ ಪ್ರಾಧಿಕಾರ 28 ಟಿಎಂಸಿಎಫ್'ಟಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದೇ ಕಾರಣಕ್ಕೆ ನಾವು ಮೇಕೆದಾಟು ಯೋಜನೆ ಆರಂಭಿಸಬೇಕು ಅನ್ನುತ್ತಿರುವುದು. ಸಮುದ್ರಕ್ಕೆ ಹರಿದು ಹೋಗುವ ಹೆಚ್ಚುವರಿ ನೀರನ್ನು ಸಂಗ್ರಹಿಸಬಹುದು. ಇದನ್ನು ಕೇಂದ್ರ ಮತ್ತು ತಮಿಳುನಾಡು ಅರ್ಥ ಮಾಡಿಕೊಳ್ಳಬೇಕು ಎಂದರು. ಕೇಂದ್ರ ಸರ್ಕಾರ ಕೂಡಲೇ ಮಧ್ಯಸ್ಥಿಕೆ ವಹಿಸಿ ಪ್ರಾಧಿಕಾರದ ಮನವೊಲಿಸಬೇಕು ಎಂದು ಹೇಳಿದ್ದಾರೆ. 

ಇದೇ ವೇಳೆ ಮಂಡ್ಯದಲ್ಲಿ ಸಂಸದೆ ಸುಮಲತಾ ಅವರು ಮನೆ ನಿರ್ಮಾಣ ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿ, ಇದು ಅವರ ಒತ್ತಡವನ್ನು ಕಡಿಮೆ ಮಾಡಲಿದೆ. ಸ್ಥಳೀಯ ಜನರ ದೂರುಗಳನ್ನು ಆಲಿಸಿ, ಪರಿಹಾರ ನೀಡಲು ಸಾಹಯಕವಾಗುತ್ತದೆ ಎಂದು ತಿಳಿಸಿದ್ದಾರೆ. 

ಜೆಡಿಎಸ್ ಮುಳುಗುತ್ತಿರುವ ಹಡಗಾಗಿದೆ ಎಂಬ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಉಸ್ತುವಾರಿ ಹೊತ್ತ ಮೇಲೆ ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಸಾಧಿಸಬೇಕು, ಆದರೆ ಅರುಣ್ ಸಿಂಗ್ ಬರೀ ಹಣ ವಸೂಲಿಗಾಗಿ ರಾಜ್ಯಕ್ಕೆ ಬರುತ್ತಿದ್ದಾರೆ. ಇನ್ನೂ ಕರ್ನಾಟಕದಿಂದ ಸಂಸತ್ ಗೆ ಆಯ್ಕೆಯಾದ ಬಿಜೆಪಿ ಸಂಸದರಿಗೆ, ರಾಜ್ಯದ ಮಂತ್ರಿಗಳಿಗೆ  ಕೇಂದ್ರ ಸರ್ಕಾರದ ಬಳಿ ಮಾತನಾಡಲು ಎಲುಬು ಇಲ್ಲ, ಮೂಳೆಯೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮೈಸೂರು ಮೇಯರ್ ಆಯ್ಕೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೋರಿ ಶಾಸಕ ಸಾ ರಾ ಮಹೇಶ್ ಕಚೇರಿಗೆ ಬಿಜೆಪಿ ನಾಯಕರು ಏಕೆ ಬಂದಿದ್ದರು? ನಾವೇನು ಬೆಂಬಲ ಕೋರಿ ಅವರ ಬಳಿಗೆ ಹೋಗಿಲ್ಲ. ಅರುಣ್ ಸಿಂಗ್ ರಾಜ್ಯದ ವಾಸ್ತವ ಪರಿಸ್ಥಿತಿ ಗೊತ್ತಿಲ್ಲ. ಇಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ವಸೂಲಿಗಾಗಿ ಅರುಣ್ ಸಿಂಗ್ ಆಗಾಗ್ಗೆ ಭೇಟಿ ನೀಡುತ್ತಾರೆ. ಜೆಡಿಎಸ್ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದು'ಎಂದರು.

ದೇವೇಗೌಡರು ಸಿಎಂಗೆ ಮಾರ್ಗದರ್ಶನ ಮಾಡಿತ್ತಿದ್ದಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ತೆಗೆದುಕೊಂಡ ನಂತರ ದೇವೇಗೌಡರನ್ನು ಭೇಟಿಯಾಗಿದ್ದರು. ನಂತರ ಯಾವುದೇ ಭೇಟಿ ಮಾಡಿಲ್ಲ. ದೂರವಾಣಿಯಲ್ಲೂ ಮುಖ್ಯಮಂತ್ರಿಗಳನ್ನು ದೇವೇಗೌಡರು ಸಂಪರ್ಕಿಸಿದ ಯಾವುದೇ ಮಾಹಿತಿ ಇಲ್ಲ. ಸಂಪರ್ಕವೇ ಇಲ್ಲದಿದ್ದಾಗ ಸಲಹೆ ಮಾರ್ಗದರ್ಶನ ವಿಚಾರ ಬರುವುದೇ ಇಲ್ಲ. ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ಒಂದು ತಿಂಗಳಾಗಿದೆ. ಈಗಾಗಲೇ ಸರ್ಕಾರ ನಡೆಯುತ್ತಿದೆ ಎಂಬದು ಹೇಳೋದು ಕಷ್ಟ. ಹಳೆ ಇಂಜಿನ್ ಕೆಟ್ಟು ಹೋಗಿದೆ ಎಂದು ಹೊಸ ಇಂಜಿನ್ ಹಾಕಲಾಗಿದೆ. ಆದರೆ ಬೋಗಿಯ ಇಂಜಿನ್‍ಗಳೆಲ್ಲವು ಕೊಳೆತು ಹೋಗಿವೆ. ಪರಿಸ್ಥಿತಿ ಹೀಗಿದ್ದಾಗ ಭ್ರಷ್ಟಾಚಾರ ಮುಕ್ತ ಆಡಳಿತ ಸಾಧ್ಯವೇ? ಇನ್ನೂ ಕೆಲವು ಸಚಿವರು ಕಛೇರಿಗೇ ಹೋಗಿಲ್ಲ, ಇನ್ನೂ ಸ್ವಲ್ಪ ದಿನ ಹೋಗಲಿ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com