ಅಧಿಕಾರಕ್ಕೆ ಬೊಮ್ಮಾಯಿ, ಪ್ರಚಾರಕ್ಕೆ ಯಡಿಯೂರಪ್ಪ: ಇದು ಬಿಜೆಪಿ ಕಾರ್ಯತಂತ್ರ!

ಕರ್ನಾಟಕದಲ್ಲಿ ಬಿಜೆಪಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭವಿಷ್ಯದ ನಾಯಕನನ್ನಾಗಿ ಬಿಂಬಿಸುತ್ತಿರುವ ಬಿಜೆಪಿ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಿದೆ.
ಬೊಮ್ಮಾಯಿ ಮತ್ತು ಯಡಿಯೂರಪ್ಪ
ಬೊಮ್ಮಾಯಿ ಮತ್ತು ಯಡಿಯೂರಪ್ಪ

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭವಿಷ್ಯದ ನಾಯಕನನ್ನಾಗಿ ಬಿಂಬಿಸುತ್ತಿರುವ ಬಿಜೆಪಿ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಿದೆ.

2023ರ ವಿಧಾನ ಸಭೆ ಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚಿಸಿದ್ದಾರೆ.

ಕಳೆದ ಎರಡು ದಶಕಗಳಿಂದ ಬಿಜೆಪಿ  ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಎದುರಿಸಿತ್ತು. 2008 ರಲ್ಲಿ 110 ಸೀಟು, 2018 ರಲ್ಲಿ 105 ಸೀಟುಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.  ಯಡಿಯೂರಪ್ಪ ಅವರ ಗುಡ್ ವಿಲ್ ಬಳಸಿಕೊಂಡು ಆ ಮೂಲಕ ಬಸವರಾಜ ಬೊಮ್ಮಾಯಿ ಮತ್ತು ಸರ್ಕಾರದ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ನಾವು ಚುನಾವಣೆಗೆ ಹೋಗುತ್ತೇವೆ ಮತ್ತು ಕನಿಷ್ಠ 120 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರವನ್ನು ರಚಿಸುತ್ತೇವೆ. ಇದು ಕರ್ನಾಟಕದ ಅಭಿವೃದ್ಧಿ ಬಯಸುವ ಡಬಲ್ ಎಂಜಿನ್ ಸರ್ಕಾರ,  ನಾವು ಬೊಮ್ಮಾಯಿ ಅವರ ಸರ್ಕಾರ ಮತ್ತು ಕೇಂದ್ರದ ಯೋಜನೆಗಳನ್ನು ಜನಪ್ರಿಯಗೊಳಿಸುತ್ತೇವೆ ಎಂದು ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ ನಂತರ ಅರುಣ್ ಸಿಂಗ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಮೈಸೂರಿಗೆ ತೆರಳಿದ್ದ ಅರುಣ್ ಸಿಂಗ್ ಇದೇ ರೀತಿಯ ಸಭೆಗಳನ್ನು ನಡೆಸಿದರು, ಮೈಸೂರು ರಾಜ ವಂಶಸ್ಥ ಯಧುವೀರ್ ಒಡೆಯರ್, ಮತ್ತು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನ ಪದಾಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿಗಳು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ವಿಶೇಷವಾಗಿ ಸಾಮಾಜಿಕ ಮಾಧ್ಯಮದವರೊಂದಿಗೆ ಅರುಣ್ ಸಿಂಗ್ ಸಭೆ ನಡೆಸಿದರು. ಪಕ್ಷವು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಸಮರ್ಥವಾಗಿ ಹೋರಾಡುತ್ತದೆ ಎಂದು ಸಿಂಗ್ ಹೇಳಿದರು. ಹಳೆ ಮೈಸೂರು ಪ್ರದೇಶದಲ್ಲಿ ಪಕ್ಷವು ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ ಅರುಣ್ ಸಿಂಗ್, ಜೆಡಿಎಸ್ ಮುಳುಗುತ್ತಿರುವ ಹಡಗಿದ್ದಂತೆ ಎಂದು ಲೇವಡಿ
ಮಾಡಿದ್ದರು.

ಕಾಂಗ್ರೆಸ್ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳದೇ ಇರುವುದರಿಂದ ಬಿಜೆಪಿಗೆ ಸುಲಭವಾಗುತ್ತದೆ. ಹಳೆಯ ಮೈಸೂರು ಪ್ರದೇಶವು ಸಾಂಪ್ರದಾಯಿಕ ಜೆಡಿಎಸ್ ಭದ್ರಕೋಟೆಯಾಗಿದ್ದು, ಒಕ್ಕಲಿಗ ಸಮುದಾಯವು ಪ್ರಾಬಲ್ಯವಿದೆ.ಅರುಣ್ ಸಿಂಗ್ ತಮ್ಮ ಪ್ರವಾಸದ ವೇಳೆ ಹಲವು ವಿಷಯಗಳನ್ನು ಗಮನಿಸಿದ್ದು, ಯಡಿಯೂರಪ್ಪ ಅವರನ್ನು ಸಂತೋಷವಾಗಿಡಲು ಅವರು ಬಯಸಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಈ ರಣತಂತ್ರ ಬಳಸಲು ಮುಂದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com