ಸೆ.13ರಿಂದ ವಿಧಾನಸಭೆ ಅಧಿವೇಶನ: ಸರ್ಕಾರದ ವಿರುದ್ಧ ತಂತ್ರ ರೂಪಿಸಲು ಸೆ.7ರಂದು ಸಿಎಲ್'ಪಿ ಸಭೆ ಕರೆದ ಸಿದ್ದರಾಮಯ್ಯ

ಸೆಪ್ಟೆಂಬರ್ 13 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. 
ಸಿದ್ಧರಾಮಯ್ಯ
ಸಿದ್ಧರಾಮಯ್ಯ

ಬೆಂಗಳೂರು: ಸೆಪ್ಟೆಂಬರ್ 13 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. 

ಅಧಿವೇಶನದ ವೇಳೆ ಸರ್ಕಾರದ ವಿರುದ್ದ ಹರಿಹಾಯಲು ತಂತ್ರ ರೂಪಿಸುವ ಸಲುವಾಗಿ ಸಿದ್ದರಾಮಯ್ಯ ಅವರು, ಸೆ.7ರಂದು ಬೆಂಗಳೂರಿನ ಖಾಸಗಿ ಹೋಟೆಲ್'ನಲ್ಲಿ ಸಭೆ ಕರೆದಿದ್ದಾರೆ. 

ಸಭೆಯಲ್ಲಿ ಶಾಸಕಾಂಗ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕಿದ್ದು, ಸದನದಲ್ಲಿ ಚರ್ಚಿಸಬಹುದಾದ ವಿಚಾರಗಳ ಕುರಿತು ಸಲಹೆ ನೀಡುವಂತೆ ಎಲ್ಲಾ ಶಾಸಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ವಿಧಾನಪರಿಷತ್ತಿನ ವಿರೋಧ ಪಕ್ಷದ ಎಸ್.ಆರ್.ಪಾಟೀಲ್, ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಇ, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್ ಹಾಗೂ ಸಲೀಂ ಅಹಮದ್ ಅವರು ಭಾಗಿಯಾಗಲಿದ್ದಾರೆಂದು ವರದಿಗಳು ತಿಳಿಸಿವೆ. 

ಸಭೆಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯದ ಆರ್ಥಿಕ ಸ್ಥಿತಿ, ಕೋವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆ ಸೇರಿದಂತೆ ಇನ್ನಿತರೆ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

ಪ್ರವಾಹ ಪರಿಸ್ಥಿತಿ ನಿರ್ವಹಣೆ, ರೈತರ ಸಂಕಷ್ಟ ಆಲಿಸುವಲ್ಲಿ ಸರ್ಕಾರ ವಿಫಲವಾಗಿದೆ. ಸರ್ಕಾರ ಸಾಕಷ್ಟು ಘೋಷಣೆಗಳನ್ನು ಮಾಡಿದ್ದು, ಅವುಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಕಳೆದ ಅಧಿವೇಶನ 2021ರ ಮಾರ್ಚ್ ತಿಂಗಳಿನಲ್ಲಿ ನಡೆದಿತ್ತು. ಅಧಿವೇಶನದ ವೇಳೆ ಸಾಕಷ್ಟು ವಿಚಾರಗಳ ಕುರಿತು ಧ್ವನಿ ಎತ್ತಬೇಕಿದೆ. ಸಿಎಲ್'ಪಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಿದ್ದೇವೆಂದು ಕೆಪಿಸಿಸಿ ಕಾರ್ಯಾಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆಯವರು ಹೇಳಿದ್ದಾರೆ. 

ಆರೋಗ್ಯ ಕುರಿತು ನಮ್ಮಲ್ಲಿ ಆಂತರಿಕೆ ವರದಿ ಇದೆ. ಸರ್ಕಾರ ಕೊರೋನಾ 2ನೇ ಅಲೆಯನ್ನು ಕೆಟ್ಟದಾಗಿ ನಿರ್ವಹಿಸಿರುವುದು ಇದರಿಂದ ತಿಳಿದುಬಂದಿದೆ. ಸರ್ಕಾರ ಬಳಸಿರುವ ನಿಧಿಗಳು, ಸರ್ಕಾರ ಮಾಡಿರುವ ಲೋಪಗಳ ಕುರಿತು ತಜ್ಞರೊಂದಿಗೆ ಸಮಾಲೋಚಿಸಿ ವರದಿ ಸಿದ್ಧಪಡಿಸಿದ್ದೇವೆ. ಈ ವರದಿಯನ್ನು ಸ್ಪೀಕರ್'ಗೆ ಸಲ್ಲಿಸುತ್ತೇವೆ. ಈ ಕುರಿತಂತೆಯೂ ಸಿಎಲ್'ಪಿ ಸಭೆಯಲ್ಲಿ ಚರ್ಚಿಸುತ್ತೇವೆಂದು ರಾಮಲಿಂಗಾರೆಡ್ಡಿಯವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com