ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಹಿನ್ನಡೆ, ಕಾಂಗ್ರೆಸ್ ಗೆ ಸ್ವಲ್ಪ ಲಾಭ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತದ ಮೂರು ಸೀಟುಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಅತಿ ಹೆಚ್ಚು ಸೀಟುಗಳನ್ನು ಈ ಬಾರಿ ಪಡೆದಿದ್ದು ಜೆಡಿಎಸ್ ಒಂದು ಸ್ಥಾನ ಗಳಿಸಿದೆ. ಆಪ್ ಒಂದು ಸ್ಥಾನವನ್ನೂ ಗಳಿಸಿಲ್ಲ, ಆದರೆ ಈ ಬಾರಿ ಹೆಚ್ಚು ಸ್ಥಾನ ಗಳಿಸಿದ್ದು ಎಐಎಂಐಎಂ ಮೂರು ವಾರ್ಡ್ ಗಳಲ್ಲಿ ಗೆದ್ದುಕೊಂಡಿದೆ.
ಬಿಜೆಪಿ ಸಾಧನೆಯನ್ನು ಸಿಹಿ ತಿನ್ನುವ ಮೂಲಕ ಸಂಭ್ರಮಿಸಿದ ಮಾಜಿ ಸಚಿವ ಜಗದೀಶ್ ಶೆಟ್ಟರ್ ಮತ್ತು ಇತರರು
ಬಿಜೆಪಿ ಸಾಧನೆಯನ್ನು ಸಿಹಿ ತಿನ್ನುವ ಮೂಲಕ ಸಂಭ್ರಮಿಸಿದ ಮಾಜಿ ಸಚಿವ ಜಗದೀಶ್ ಶೆಟ್ಟರ್ ಮತ್ತು ಇತರರು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತದ ಮೂರು ಸೀಟುಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಅತಿ ಹೆಚ್ಚು ಸೀಟುಗಳನ್ನು ಈ ಬಾರಿ ಪಡೆದಿದ್ದು ಜೆಡಿಎಸ್ ಒಂದು ಸ್ಥಾನ ಗಳಿಸಿದೆ. ಆಪ್ ಒಂದು ಸ್ಥಾನವನ್ನೂ ಗಳಿಸಿಲ್ಲ, ಆದರೆ ಈ ಬಾರಿ ಹೆಚ್ಚು ಸ್ಥಾನ ಗಳಿಸಿದ್ದು ಎಐಎಂಐಎಂ ಮೂರು ವಾರ್ಡ್ ಗಳಲ್ಲಿ ಗೆದ್ದುಕೊಂಡಿದೆ.

82 ಸದಸ್ಯ ಬಲದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳನ್ನು, ಕಾಂಗ್ರೆಸ್ 33 ಮತ್ತು 6 ಮಂದಿ ಸ್ವತಂತ್ರ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ. 60ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಬಿಜೆಪಿ ನಾಯಕರು ಗೆಲ್ಲುವ ಆಶಾವಾದದಲ್ಲಿದ್ದರೂ, ಆದರೆ ಸದಸ್ಯ ಬಲದ ಅರ್ಧದಷ್ಟು ಅಂದರೆ 42 ಸದಸ್ಯರು ಗೆಲ್ಲುವಲ್ಲಿ ವಿಫಲವಾಗಿದೆ. ಹೀಗಾಗಿ ಪಾಲಿಕೆ ಚುನಾವಣೆ ಬಿಜೆಪಿಗೆ ಹಿನ್ನಡೆಯಾಗಿದೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ್ತು ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರಗಳಲ್ಲಿ ಕೂಡ ಅಭ್ಯರ್ಥಿಗಳು ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಈ ಎರಡೂ ಕ್ಷೇತ್ರಗಳ 50 ವಾರ್ಡ್ ಗಳಲ್ಲಿ ಬಿಜೆಪಿ 27 ವಾರ್ಡ್ ಗಳಲ್ಲಿ ಗೆದ್ದರೆ ಕಾಂಗ್ರೆಸ್ 18 ವಾರ್ಡ್ ಗಳಲ್ಲಿ ಗೆದ್ದುಕೊಂಡಿದೆ.

ಬಿಜೆಪಿ ಇದೀಗ ಪಾಲಿಕೆಯಲ್ಲಿ ಅಧಿಕಾರ ಪಡೆಯಲು ಸ್ವತಂತ್ರ ಅಭ್ಯರ್ಥಿಗಳನ್ನು ನಂಬಿಕೊಂಡಿದೆ. 2013ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿತ್ತು. ಆದರೆ ಆಗ ಕೆಜೆಪಿ ಮತ್ತು ಸ್ವತಂತ್ರ ಸದಸ್ಯರ ಸಹಾಯದಿಂದ ಅಧಿಕಾರ ಪಡೆದಿತ್ತು. ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಈ ಬಾರಿ ಕೂಡ ಬಿಜೆಪಿ ಅಧಿಕಾರ ನಡೆಸಲಿದೆ. ಪಕ್ಷದ ಸದಸ್ಯರು ಬಂಡಾಯವೆದ್ದು ಗೆದ್ದರೆ ಅವರನ್ನು ಮತ್ತೆ ಪಕ್ಷಕ್ಕೆ ಮತ್ತೆ ಕರೆಸುವಲ್ಲಿ ಕಷ್ಟವಿಲ್ಲ. ಪಕ್ಷ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಿದೆ ಎಂದರು.

ಕಾಂಗ್ರೆಸ್ ಭದ್ರಕೋಟೆಯಲ್ಲಿ ಈ ಬಾರಿ ಎಐಎಂಐಎಂ ಗೆಲುವು, ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್ ಗಳಲ್ಲಿನ ಗೆಲುವು ಕಾಂಗ್ರೆಸ್ ಗೆ ಆತಂಕ ತಂದಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ತಪ್ಪು ಮಾಡಿದ್ದೇವೆ ಮತ್ತು ಒವೈಸಿಯವರ ಭೇಟಿ ಕೂಡ ಕಾರಣವಾಗಿದೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಫ್ ಹಲ್ಲೂರ್ ತಿಳಿಸಿದ್ದಾರೆ.

ಬಿಜೆಪಿ ನಾಯಕರಲ್ಲಿನ ಅತಿಯಾದ ವಿಶ್ವಾಸ ಮತ್ತು ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವೈಫಲ್ಯ ಬಿಜೆಪಿಯ ಹಿನ್ನಡೆಗೆ ಕಾರಣ ಎಂದು ರಾಜಕೀಯ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಡಿಮೆ ಮತದಾನ, ಮಿಶ್ರ ಪ್ರತಿಕ್ರಿಯೆ ಅಭ್ಯರ್ಥಿಗಳ ಮೇಲೆ ಜನರಿಗೆ ನಂಬಿಕೆ, ವಿಶ್ವಾಸ ಕಡಿಮೆಯಾಗುತ್ತಿದೆ ಎಂಬುದನ್ನು ತೋರಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com