2023 ವಿಧಾನಸಭಾ ಚುನಾವಣೆ ವೇಳೆ ಬಿಎಸ್'ವೈ 'ಮಾರ್ಗದರ್ಶಕ'ರಾಗಿ ಪಕ್ಷ ಮುನ್ನಡೆಸಲಿದ್ದಾರೆ: ನಳಿನ್ ಕುಮಾರ್ ಕಟೀಲ್

2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷವನ್ನು ಮಾರ್ಗದರ್ಶಕರಾಗಿ ಮುನ್ನಡೆಸಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಹೇಳಿದ್ದಾರೆ. 
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷವನ್ನು ಮಾರ್ಗದರ್ಶಕರಾಗಿ ಮುನ್ನಡೆಸಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಹೇಳಿದ್ದಾರೆ. 

ಬಿಜೆಪಿ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟ ನಾಯಕರನ್ನು ಮಾರ್ಗದರ್ಶಕ ಮಂಡಳಿಗೆ ಸೇರ್ಪಡೆಗೊಳಿಸಲಾಗುತ್ತದೆ. ಈ ಮಂಡಳಿಗೆ ಸೇರಿದ ಹಿರಿಯ ನಾಯಕರು ರಾಜಕೀಯದಲ್ಲಿ ಸಕ್ರಿಯರಾಗಿರದೆ ಪಕ್ಷಕ್ಕಾಗಿ ದುಡಿಯುವ ಕೆಲಸಗಳನ್ನು ಮಾಡುತ್ತಾರೆ. ಯಡಿಯೂರಪ್ಪ ಅವರ ಮಾರ್ಗದರ್ಶಕ ಮಂಡಳಿ ಸೇರ್ಪಡೆ ಕುರಿತು ಈ ವರೆಗೂ ಯಾವುದೇ ಬಿಜೆಪಿ ನಾಯಕರೂ ಯಾವುದೇ ರೀತಿಯ ಹೇಳಿಕೆಗಳನ್ನು ನೀಡಿರಲಿಲ್ಲ. ಆದರೆ, ಇದೀಗ ನಳಿನ್ ಕುಮಾರ್ ಅವರು ಈ ಕುರಿತು ಹೇಳಿಕೆ ನೀಡಿರುವುದು ಮಹತ್ವವನ್ನು ಪಡೆದುಕೊಂಡಿದೆ. 

ನಿನ್ನೆಯಷ್ಟೇ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮೂರು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. 

ಈ ಹಿನ್ನೆಲೆಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಧಾನಸಭಾ ಚುನಾವಣೆ ವೇಳೆ ಪಕ್ಷವು ಒಂದು ತಂಡದಂತೆ ಕೆಲಸ ಮಾಡಲಿದೆ. ಮೂರು ನಗರಪಾಲಿಕೆಗಳು ಸೇರಿದಂತೆ ಕೆಲವು ಉಪ ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಅದಕ್ಕಾಗಿ ಮತದಾರರನ್ನು ಹಾಗೂ ತಮಗೆ ಆಶೀರ್ವಾದ ಮಾಡಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಚುನಾವಣೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತ ಮತ್ತು ಯಡಿಯೂರಪ್ಪ ಅವರ ಮಾರ್ಗದರ್ಶನದಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದ ಜನೋಪಯೋಗಿ ಕಾರ್ಯಗಳಿಗೆ ಜನಮನ್ನಣೆ ದೊರಕಿದೆ. ಈ ಮೂಲಕ ಜನರು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದ್ದಾರೆಂದು ಹೇಳಿದ್ದಾರೆ. 

ಇದೇ ವೇಳೆ ಯಡಿಯೂರಪ್ಪ ಅವರ ರಾಜ್ಯ ಪ್ರವಾಸದ ಕುರಿತು ಎದ್ದಿರುವ ಗೊಂದಲಗಳಿಗೂ ತೆರೆ ಎಳೆದಿರುವ ಅವರು, ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೆ ತಾವು ರಾಜ್ಯ ಪ್ರವಾಸ ಮಾಡುವುದಾಗಿ ತಿಳಿಸಿದ್ದಾರೆ. ಇಬ್ಬರೂ ನಾಯಕರು ಜೊತೆಯಾಗಿ ರಾಜ್ಯ ಪ್ರವಾಸ ಮಾಡಲಿದ್ದು, ಈ ಕುರಿತ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com