ಕುಮಾರಸ್ವಾಮಿ ಜೊತೆ ಬೊಮ್ಮಾಯಿ, ದೇವೇಗೌಡರ ಬಳಿ ಖರ್ಗೆ ಚರ್ಚೆ: ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಬೆಂಬಲ ಯಾರಿಗೆ?

55 ಸದಸ್ಯರ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಸರಳ ಬಹುಮತ ಗಳಿಸಲು ಸಾಧ್ಯವಾಗಲಿಲ್ಲ, ಸೋಮವಾರ ಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಕುಮಾರಸ್ವಾಮಿ ಮತ್ತು ಎಚ್.ಡಿ ದೇವೇಗೌಡ
ಕುಮಾರಸ್ವಾಮಿ ಮತ್ತು ಎಚ್.ಡಿ ದೇವೇಗೌಡ

ಬೆಂಗಳೂರು: 55 ಸದಸ್ಯರ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಸರಳ ಬಹುಮತ ಗಳಿಸಲು ಸಾಧ್ಯವಾಗಲಿಲ್ಲ, ಸೋಮವಾರ ಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟವಾಗಿದೆ, ನಾಲ್ಕು ಸ್ಥಾನ ಪಡೆದ ಜೆಡಿಎಸ್ ಪಕ್ಷವನ್ನು ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ತಂತ್ರ ರೂಪಿಸುತ್ತಿವೆ.

ಎರಡು ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸ ವ್ಯಕ್ತ ಪಡಿಸಿದ್ದರೂ, ಜೆಡಿಎಸ್ ನಿರ್ಧಾರವೇ ಅಂತಿಮವಾಗಿರುತ್ತದೆ. ಆದರ ಈ ಸಂಬಂಧ ಜೆಡಿಎಸ್ ಇನ್ನೂ ತನ್ನ ನಿರ್ಧಾರ ಪ್ರಕಟಿಸಿಲ್ಲ.

ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮುನ್ನ ನಾಲ್ವರು ಜೆಡಿಎಸ್ ಕೌನ್ಸಿಲ್ ಸದಸ್ಯರು ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ. ಕಾಂಗ್ರೆಸ್ 27 ವಾರ್ಡ್‌ಗಳಲ್ಲಿ, ಬಿಜೆಪಿ 23 ಮತ್ತು ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆದ್ದರೆ ಒಂದು ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಕಲಬುರಗಿ ನಿಗಮ ಮಂಡಳಿಯು ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಮಾಡಲು 64 ಮತದಾರರನ್ನು ಹೊಂದಿದೆ, ಅದರಲ್ಲಿ 55 ಚುನಾಯಿತ ಕೌನ್ಸಿಲರ್‌ಗಳು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳಿದ್ದಾರೆ. 23 ಹೊಸದಾಗಿ ಆಯ್ಕೆಯಾದ ಕೌನ್ಸಿಲರ್‌ಗಳು, ಒಬ್ಬ ಸ್ವತಂತ್ರ ಕೌನ್ಸಿಲರ್, ಓರ್ವ ಎಂಪಿ, ಎಂಎಲ್‌ಎ ಮತ್ತು ಎಂಎಲ್‌ಸಿಗಳು ಸೇರಿದಂತೆ
ಬಿಜೆಪಿ 29 ಮತಗಳನ್ನು ಹೊಂದಿದೆ. ಅಂತೆಯೇ, ಕಾಂಗ್ರೆಸ್ ಹೊಸದಾಗಿ ಚುನಾಯಿತರಾದ 27 ಸದಸ್ಯರು, ಒಬ್ಬ ಸಂಸದ, ಒಬ್ಬ ಶಾಸಕ ಮತ್ತು ಒಬ್ಬ ಎಂಎಲ್‌ಸಿ ಸೇರಿದಂತೆ 30 ಮತದಾರರನ್ನು ಹೊಂದಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಲಬುರಗಿ ನಗರ ಪಾಲಿಕೆಯಲ್ಲಿ ಬಿಜೆಪಿ ಜೊತೆ ಕೈ ಜೋಡಿಸಲು ಜೆಡಿಎಸ್ ಆಸಕ್ತಿ ತೋರಿಸಿದೆ ಎಂದು ಹೇಳಿದ್ದಾರೆ. "ಈ ಸಂಬಂಧ ನಾನು ಜೆಡಿಎಸ್ ನಾಯಕರೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ಕೂಡ ಮೈತ್ರಿ ಪಾಲುದಾರರಾಗುವ ಆಶಯ ವ್ಯಕ್ತಪಡಿಸಿದ್ದಾರೆ. ಇದೊಂದು ಒಳ್ಳೆಯ ಸಂಕೇತ ”ಎಂದು ಅವರು ಹೇಳಿದರು, ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರವೇ ಅವರು ಮೈತ್ರಿ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.

ದನ್ನೂ ಓದಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಬಹುತೇಕ ಖಚಿತ: ಸಿಎಂ ಬೊಮ್ಮಾಯಿ
 
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನಾಲ್ಕು ಸ್ಥಾನಗಳು ಬಂದಿವೆ. ಆದರೆ ನಾಲ್ಕು ಸ್ಥಾನಗಳು ಬರುತ್ತವೆ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನನ್ನ ಬಳಿ ಮಾತಾಡಿದ್ದಾರೆ. ಕುಮಾರಸ್ವಾಮಿ ಹತ್ರವೂ ಮಾತಾಡಿದ್ದಾರೆ. ಆದರೆ ಸ್ಥಳೀಯ ಮುಖಂಡರ ಅಭಿಪ್ರಾಯ
ಪಡೆಯದೇ ನಾವೇ ತೀರ್ಮಾನ ಮಾಡಬಾರದು ಎಂದು ಕುಮಾರಸ್ವಾಮಿಗೆ ಸೂಚಿಸಿದ್ದೇನೆ. ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು. ನನ್ನ ಜೊತೆ ಬಿಜೆಪಿಯ ಯಾವ ನಾಯಕರು ಮಾತನಾಡಿಲ್ಲ ಎಂದು ತಿಳಿಸಿದರು.

ಸೋಮವಾರ ಸಂಜೆ, ಕುಮಾರಸ್ವಾಮಿ ನೀರಾವರಿ ಯೋಜನೆಗಳ ಅನುಷ್ಠಾನ ವಿಳಂಬ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ನೆಪದಲ್ಲಿ ತಮ್ಮ ಪಕ್ಷದ ಶಾಸಕರ ನಿಯೋಗವನ್ನು ಸಿಎಂ ಬೊಮ್ಮಾಯಿ ಬಳಿಗೆ ಕರೆದೊಯ್ದಿದ್ದರು. ಕಾಂಗ್ರೆಸ್ ಕೂಡ ತನ್ನ ಪ್ರಯತ್ನವನ್ನು ಬಿಡುತ್ತಿಲ್ಲ. ತಮ್ಮ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ದೇವೇಗೌಡರೊಂದಿಗೆ
ಮಾತನಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕಲಬುರಗಿಯಲ್ಲಿ ಜಾತ್ಯತೀತ ಪಕ್ಷಗಳು ಕೈಜೋಡಿಸಿ ಆಡಳಿತ ನಡೆಸುತ್ತವೆ. ನಾವು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ ಮತ್ತು ಪ್ರಜಾಪ್ರಭುತ್ವದಲ್ಲಿ, ಹೆಚ್ಚು ಸ್ಥಾನಗಳನ್ನು ಹೊಂದಿರುವ ಪಕ್ಷವು ಅಧಿಕಾರಕ್ಕೆ ಬರುವುದು ನ್ಯಾಯಯುತವಾಗಿದೆ ಎಂದು ಅವರು ಹೇಳಿದರು.

ಆದರೆ, ಜೆಡಿಎಸ್ ತನ್ನ  ನಿಲುವನ್ನು ಇನ್ನೂ ಬಹಿರಂಗಪಡಿಸುತ್ತಿಲ್ಲ. ಮೈತ್ರಿ ಬಗ್ಗೆ ಪಕ್ಷದ ನಾಯಕತ್ವ ನಿರ್ಧರಿಸುತ್ತದೆ, ಕುಮಾರಸ್ವಾಮಿ ಏನೇ ನಿರ್ಧಾರ ಕೈಗೊಂಡರು ನಾವು ಅವರೊಂದಿಗೆ ಇರುತ್ತೇವೆ ಎಂದು  ಜೆಡಿಎಸ್ ಹಿರಿಯ ನಾಯಕ ಬಂಡೆಪ್ಪ ಕಾಶಂಪುರ್ ತಿಳಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com