ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಹೊಸ ಕನಸು!

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ದೆಹಲಿ ಬೇಟಿ ಸಿಎಂ ಡೆಲ್ಲಿ ಭೇಟಿಯು ‘ಕಮಲ ಪಾಳಯ’ದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಕನಸು ಚಿಗುರಿಕೊಂಡಿದೆ. 
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರುವ ಸಿಎಂ ಬೊಮ್ಮಾಯಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ದೆಹಲಿ ಬೇಟಿ ಸಿಎಂ ಡೆಲ್ಲಿ ಭೇಟಿಯು ‘ಕಮಲ ಪಾಳಯ’ದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಕನಸು ಚಿಗುರಿಕೊಂಡಿದೆ. 

ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ನಡುವಲ್ಲೇ ರಾಷ್ಟ್ರ ರಾಜಧಾನಿ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡುವುದರಿಂದ ಉಳಿದ ನಾಲ್ಕು ಸಚಿವ ಸ್ಥಾನಗಳ ಭರ್ತಿ ಕುರಿತು ಹೈಕಮಾಂಡ್ ಜೊತೆಗೆ ಬೊಮ್ಮಾಯಿಯವರು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

2 ದಿನಗಳ ಕಾಲ ದೆಹಲಿಗೆ ಭೇಟಿ ನೀಡಿರುವ ಬೊಮ್ಮಾಯಿಯವರು ಮೊದಲ ದಿನವಾದ ನಿನ್ನೆ ನೇರವಾಗಿ ನಾರ್ತ್ ಬ್ಲಾಕ್ ನಲ್ಲಿರುವ ನಿರ್ಮಲಾ ಸೀತಾರಾಮನ್ ಕಚೇರಿಗೆ ತೆರಳಿ ಕೇಂದ್ರ ಹಣಕಾಸು ಸಚಿವರೊಂದಿಗೆ ಮಾತುಕತೆ ನಡೆಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ ಮಹಿಳೆಯರಿಗೆ ಅನುಕೂಲ ಮಾಡಿ ಕೊಡಲಿರುವ ನಬಾರ್ಡ್ ಯೋಜನೆಗಳಿಗೆ ಸಂಬಂಧಿಸಿ ಮಾತುಕತೆ ನಡೆಸಿದ್ದೇನೆ. ಜೊತೆಗೆ ಜಿಎಸ್'ಟಿ ಸಂಗ್ರಹ ಹಾಗೂ ರಾಜ್ಯದ ಪಾಲಿನ ವಿಚಾರವನ್ನೂ ಮಾತುಕತೆ ವೇಳೆ ಪ್ರಸ್ತಾಪಿಸಿದ್ದೇನೆಂದು ಹೇಳಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಭೇಟಿ ಮಾಡಲಿದ್ದೇನೆಂದು ತಿಳಿಸಿದ್ದರು.

ಬಳಿಕ ಕೇಂದ್ರ ತಂತ್ರಜ್ಞಾನ ಸಚಿವರೂ ಆಗಿರುವ ರೈಲ್ವೇ ಸಚಿವ ಅಶ್ವಿನ್ ರನ್ನು ಭೇಟಿಯಾದ ಬೊಮ್ಮಾಯಿಯವರು, ರಾಜ್ಯದ ರೈಲ್ವೇ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಹುಬ್ಬಳ್ಳಿ-ಅಂಕೋಲಾ ಮಾರ್ಗ ಇನ್ನೂ ನನೆಗುದಿಗೆ ಬಿದ್ದಿದ್ದು, ಆದಷ್ಟು ಬೇಗ ಈ ಯೋಜನೆ ಕಾರ್ಯಗತಗೊಳಿಸಬೇಕು. ರೂ.4,300 ಕೋಟಿ ವೆಚ್ಚದಲ್ಲಿ ಭಾರತ್ ನೆಟ್ ಯೋಜನೆಯಡಿ ಕರ್ನಾಟಕವನ್ನೂ ಸೇರಿಸಿಕೊಳ್ಳಬೇಕಎಂದು ಮನವಿ ಸಲ್ಲಿಸಿದರು. ಜೊತೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಕುರಿತೂ ಮಾತುಕತೆ ನಡೆಸಿದ್ದೇನೆಂದು ತಿಳಿಸಿದರು. 

ಇಂದು ಮುಖ್ಯಮಂತ್ರಿಗಳು ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಲಿದ್ದು, ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ. 

ಇದಷ್ಟೇ ಅಲ್ಲದೆ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿಯವರನ್ನೂ ಭೇಟಿ ಮಾಡಲಿದ್ದು, ವಸತಿ ಯೋಜನೆ ಹಾಗೂ ಮೆಟ್ರೋ ಯೋಜನೆ ವಿಸ್ತರಣೆ ಕುರಿತು ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com