ಸಮನ್ವಯತೆ ಕೊರತೆಯಿಂದ ಬೆಳಗಾವಿ ಪಾಲಿಕೆಯಲ್ಲಿ ಕಡಿಮೆ ಸ್ಥಾನ: ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ಕಾಂಗ್ರೆಸ್​ನಲ್ಲಿ ಎರಡು ಬಣಗಳು ಇರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್​ನಲ್ಲಿ ಎರಡು ಬಣಗಳು ಇರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ.. ಪಕ್ಷದಲ್ಲಿ ಬಣಗಳ ಮೇಲಾಟ ನಡೆದಿದ್ದರಿಂದ ಹಿನ್ನಡೆ ಕಾಣಬೇಕಾಯಿತು ಎಂದು ಸತೀಶ್ ಜಾರಕಿಹೊಳಿ ಹೇಳಿದರು. 

ಹೊಂದಾಣಿಕೆ ಕೊರತೆಯ ಕಾರಣ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣದಲ್ಲಿ 3, ಉತ್ತರದಲ್ಲಿ 5 ಕ್ಷೇತ್ರ ಕಳೆದುಕೊಳ್ಳಬೇಕಾಯಿತು ಎಂದರು. ಬೆಳಗಾವಿ ಕಾಂಗ್ರೆಸ್ ಘಟಕದಲ್ಲಿ ಮೂರು ಬಣಗಳು ಇಲ್ಲ. ಇರುವುದು ಎರಡೇ ಬಣ. ಉತ್ತರ ಕ್ಷೇತ್ರ, ದಕ್ಷಿಣ ಕ್ಷೇತ್ರಕ್ಕೆ ಹೊಂದಾಣಿಕೆ ಆಗುತ್ತಿಲ್ಲ. ಉತ್ತರ ಧ್ರುವದಿಂ ದಕ್ಷಿಣ ಧ್ರುವಕು ಎಂಬಂತೆ ಕೆಲವರೊಂದಿಗೆ ಸಹಯೋಗದ ಕೆಲಸ ಸಾಧ್ಯವಾಗುತ್ತಿಲ್ಲ ಎಂದು  ಪರೋಕ್ಷವಾಗಿ ಒಪ್ಪಿಕೊಂಡರು.

ಪಕ್ಷವು ಕನಿಷ್ಠ 20-25 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು, ಆದರೆ ಕೇವಲ 10 ಸ್ಥಾನದಲ್ಲಿ ಗೆಲುವು ಸಾಧಿಸಿದ್ದೇವೆ. ಐದು ಸ್ವತಂತ್ರರು ಕಾಂಗ್ರೆಸ್ ಪಕ್ಷದೊಂದಿಗೆ ಇದ್ದಾರೆ ಎಂದು ಅವರು ಹೇಳಿದರು. ಪ್ರತಿ ವಾರ್ಡ್‌ನಲ್ಲಿ 3-4 ಎಂಇಎಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದು ಬಿಜೆಪಿಗೆ ಲಾಭವಾಗಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com