ಮುಳುಗಿ ಹೋಗುವ ಹಡಗಿನ ಸಹವಾಸ ಏಕೆ? ಹಡಗು ಮುಳುಗಿದರೆ ನಮ್ಮ ಬಳಿ ಸಬ್‌ ಮೆರಿನ್ ಇದೆ, ಪಕ್ಷ ಉಳಿಸಿಕೊಳ್ಳುವುದು ಗೊತ್ತು!

ಜೆಡಿಎಸ್‌ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ.
ಎಚ್.ಡಿ ರೇವಣ್ಣ
ಎಚ್.ಡಿ ರೇವಣ್ಣ

ಹಾಸನ: ಜೆಡಿಎಸ್‌ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಮಾರ್ಮಿಕವಾಗಿ ಹೇಳಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಜೆಡಿಎಸ್‌ ಬೆಂಬಲ ನೀಡಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೀವು ಮುಳುಗುವ ಹಡಗಿನ ಜೊತೆ ಯಾಕೆ ಬರುತ್ತೀರಾ? ಮುಳುಗುವ ಹಡಗಿನ ಜೊತೆ ಸೇರಿ ನಿಮ್ಮ‌ ಸ್ಥಾನಕ್ಕೆ‌ ಕುತ್ತು ತಂದುಕೊಳ್ಳಬೇಡಿ' ಎಂದು ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರ ಹಿಡಿಯಲು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ವರದಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಜೆಡಿಎಷ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಅರುಣ್ ಸಿಂಗ್ ಹೇಳಿದ್ದನ್ನು ಸಿ.ಎಂ ಪಾಲಿಸಲಿ. ಹಡಗು ಮುಳುಗಿದರೆ ನಮ್ಮ ಬಳಿ ಸಬ್‌ ಮೆರಿನ್ ಇದೆ. ಪಕ್ಷ ಉಳಿಸಿಕೊಳ್ಳುವುದು ಗೊತ್ತು’ ಎಂದು ಟಾಂಗ್ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com