ಶಾಸಕ ಜಿ.ಟಿ. ದೇವೇಗೌಡ, ಕೆ. ಶ್ರೀನಿವಾಸಗೌಡ ವಿರುದ್ಧ ಶಿಸ್ತು ಕ್ರಮ: ಎಚ್.ಡಿ. ದೇವೇಗೌಡ

ಕಾಂಗ್ರೆಸ್ ಮುಖಂಡರ ಜತೆ ಸೇರಿಕೊಂಡು ಜೆಡಿಎಸ್ ಪಕ್ಷಕ್ಕೆ ಹಾನಿಯಾಗುವಂತೆ ಮಾತನಾಡುತ್ತಿರುವ ಕೋಲಾರ ಶಾಸಕ ಕೆ.‌ಶ್ರೀನಿವಾಸ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ

ಬೆಂಗಳೂರು: ಕಾಂಗ್ರೆಸ್ ಮುಖಂಡರ ಜತೆ ಸೇರಿಕೊಂಡು ಜೆಡಿಎಸ್ ಪಕ್ಷಕ್ಕೆ ಹಾನಿಯಾಗುವಂತೆ ಮಾತನಾಡುತ್ತಿರುವ ಕೋಲಾರ ಶಾಸಕ ಕೆ.‌ಶ್ರೀನಿವಾಸ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.

ತನ್ನದೇ ಪಕ್ಷದ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮಕ್ಕೆ ಜೆಡಿಎಸ್ ಮುಂದಾಗಿದೆ. ನೇರವಾಗಿ ಪಕ್ಷಕ್ಕೆ ಹಾನಿಯಾಗುವ ರೀತಿಯಲ್ಲಿ ಅವರು ಮಾತನಾಡುತ್ತಿದ್ದಾರೆ. ಶಾಸಕ ಜಿ.ಟಿ. ದೇವೇಗೌಡ ಅವರು ಕೂಡ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ. ತಮಗೆ ಹಾಗೂ ಮಗನಿಗೆ ಟಿಕೆಟ್ ನೀಡುವಂತೆ ಸಿದ್ದರಾಮಯ್ಯ ಬಳಿ ಕೇಳಿರುವುದಾಗಿ ಹೇಳಿಕೊಂಡಿದ್ದಾರೆ.

ಶ್ರೀನಿವಾಸ್ ಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರನ್ನು ಬೆಂಬಲಿಸಿದ್ದರು. ಕೋಲಾರದ ಕೆಸಿ ವ್ಯಾಲಿ ಯೋಜನೆ ಬಗ್ಗೆ ಮಾತನಾಡಿದ್ದ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ.

"ದೇವೇಗೌಡರು ಸೂಚಿಸಿದಂತೆ ನಾವು ಶ್ರೀನಿವಾಸ್ ಗೌಡ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ" ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ , ಮಾತನಾಡಿ ನಾವು ಸೆಪ್ಟೆಂಬರ್ 13 ರಂದು ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ ಮತ್ತು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com