ಬಿಜೆಪಿ ಸೇರಲು ಹಣದ ಆಫರ್ ಬಂದಿತ್ತು: ವಿಧಾನಸಭೆ ಅಧಿವೇಶನಕ್ಕೂ ಮುನ್ನ ಶ್ರೀಮಂತ ಪಾಟೀಲ್ ಹೇಳಿಕೆ

ಸಚಿವ ಸ್ಥಾನಕ್ಕೆ ಪಟ್ಟುಹಿಡಿರುವ ಕಾಗ್ವಾಡ ಶಾಸಕ ಶ್ರೀಮಂತ್ ಪಾಟೀಲ್ ತಾವು ಬಿಜೆಪಿಗೆ ಸೇರಿದ್ದು ಹೇಗೆ ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ.
ಶ್ರೀಮಂತ ಪಾಟೀಲ್
ಶ್ರೀಮಂತ ಪಾಟೀಲ್

ಕಾಗವಾಡ: ಸಚಿವ ಸ್ಥಾನಕ್ಕೆ ಪಟ್ಟುಹಿಡಿರುವ ಕಾಗ್ವಾಡ ಶಾಸಕ ಶ್ರೀಮಂತ್ ಪಾಟೀಲ್ ತಾವು ಬಿಜೆಪಿಗೆ ಸೇರಿದ್ದು ಹೇಗೆ ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ.

"ಪಕ್ಷಕ್ಕೆ ಸೇರ್ಪಡೆಯಾಗಲು ಎಷ್ಟು ಹಣ ಬೇಕೆಂದು ಪಕ್ಷ ಕೇಳಿತ್ತು. ಆದರೆ ನಾನು ಜನರ ಸೇವೆ ಮಾಡಲು ಸರ್ಕಾರದಲ್ಲಿ ಉತ್ತಮ ಹುದ್ದೆ ನೀಡಲು ಕೇಳಿದ್ದೆ". ಎಂದು ಶಾಸಕ ಶ್ರೀಮಂತ್ ಪಾಟೀಲ್ ಹೇಳಿರುವುದು ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಕಾಗ್ವಾಡ ತಲೂಕಿನ ಐನಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶ್ರೀಮಂತ ಪಾಟೀಲ್ ಶಂಕುಸ್ಥಾಪನೆ ನಡೆಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಬಳಿಕ ಮಾಧ್ಯಮದವರು ಸಚಿವ ಸ್ಥಾನದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು, "ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು ಆಪರೇಷನ್ ಕಮಲದ ವೇಳೆ ನನಗೆ ದೊಡ್ಡ ಮೊತ್ತದ ಹಣದ ಆಮಿಷ ಬಂದಿತ್ತು. ಆದರೆ ಅದನ್ನು ನಿರಾಕರಿಸಿದ ನಾನು ನನ್ನ ಕ್ಷೇತ್ರ, ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರದಲ್ಲಿ ದೊಡ್ಡ ಹುದ್ದೆಯನ್ನು ಕೇಳಿದ್ದೆ. ಆದರೆ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ದೊರೆತಿಲ್ಲ. ಬಿಜೆಪಿ ನಾಯಕರು ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ, ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com