2023ರ ವಿಧಾನಸಭೆ ಚುನಾವಣೆ: ಸಿಎಂ ಬೊಮ್ಮಾಯಿಗೆ ಜಾತಿ ಗಣತಿ ಕಂಟಕ; ವಿರೋಧ ಪಕ್ಷಗಳಿಗೆ ಪ್ರಬಲ ಅಸ್ತ್ರ!

ಹಲವು ಅಭಿವೃದ್ಧಿಪರ ಯೋಜನೆಗಳಿಗೆ ಒಪ್ಪಿಗೆ ಪಡೆದು ದೆಹಲಿ ಪ್ರವಾಸ ಮುಗಿಸಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಆದರೆ ವಿರೋಧ ಪಕ್ಷಗಳ ಬಹುಬೇಡಿಕೆಯ ಜಾತಿ ಗಣತಿಯನ್ನು ತಕ್ಷಣಕ್ಕೆ ಆರಂಭಿಸುವ ಲಕ್ಷಣ ಕಾಣುತ್ತಿಲ್ಲ.
ಬಿ ಎಸ್ ಯಡಿಯೂರಪ್ಪನವರೊಂದಿಗೆ ಬಸವರಾಜ ಬೊಮ್ಮಾಯಿ
ಬಿ ಎಸ್ ಯಡಿಯೂರಪ್ಪನವರೊಂದಿಗೆ ಬಸವರಾಜ ಬೊಮ್ಮಾಯಿ

ತುಮಕೂರು: ಹಲವು ಅಭಿವೃದ್ಧಿಪರ ಯೋಜನೆಗಳಿಗೆ ಒಪ್ಪಿಗೆ ಪಡೆದು ದೆಹಲಿ ಪ್ರವಾಸ ಮುಗಿಸಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಆದರೆ ವಿರೋಧ ಪಕ್ಷಗಳ ಬಹುಬೇಡಿಕೆಯ ಜಾತಿ ಗಣತಿಯನ್ನು ತಕ್ಷಣಕ್ಕೆ ಆರಂಭಿಸುವ ಲಕ್ಷಣ ಕಾಣುತ್ತಿಲ್ಲ.

ಮುಂದಿನ ಸೋಮವಾರ ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಜಾತಿ ಗಣತಿ ವಿಷಯವನ್ನು ಪ್ರಮುಖ ಅಸ್ತ್ರವಾಗಿ ತೆಗೆದುಕೊಳ್ಳಲು ವಿರೋಧ ಪಕ್ಷಗಳು ಮುಂದಾಗಿವೆ, ಹಿಂದುಳಿದ ವರ್ಗಗಳು 2017 ರಲ್ಲಿ ಪೂರ್ಣಗೊಂಡ ಹಿಂದುಳಿದ ವರ್ಗಗಳ ಆಯೋಗದ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲು ಈಗಾಗಲೇ ಒತ್ತಾಯಿಸಿವೆ. ಆದರೆ ಈಗಿನ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು, ಹಿಂದಿನ ಸದಸ್ಯ-ಕಾರ್ಯದರ್ಶಿ ಮತ್ತು ಕೆಲವು ಸದಸ್ಯರು ಸಿದ್ಧರಿಲ್ಲ ಎಂದು ಹೇಳುತ್ತಿದ್ದಾರೆ. ವರದಿಗೆ ಸಹಿ ಹಾಕಲು ವಾಸ್ತವವಾಗಿ, ಮುಖ್ಯಮಂತ್ರಿ ಒಪ್ಪಿಗೆ ನೀಡದ ಹೊರತು ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ.

ಹೊಸದಾಗಿ ಅಸ್ಥಿತ್ವಕ್ಕೆ ಬಂದಿರುವ ಒಕ್ಕಲಿಗ ವೀರಶೈವ ಲಿಂಗಾಯತ ವೇದಿಕೆ ವರದಿಯನ್ನು ಅಂಗೀಕರಿಸಿ ಸರ್ಕಾರ ಬಿಡುಗಡೆ ಮಾಡಲು ಮುಂದಾದರೆ ವಿರೋಧಿಸಲು ಸಿದ್ಧತೆ ನಡೆಸುತ್ತಿದೆ. ವರದಿ ಬಿಡುಗಡೆಗೆ ವಿರೋಧಿಸಲು ಆಯಾ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ವೇದಿಕೆ ಹಲವು ಸಭೆಗಳನ್ನು ನಡೆಸಿದೆ. ಅದಲ್ಲದೆ, ವೀರಶೈವ ಮಹಾಸಭಾದ ಕೇಂದ್ರ ಸಮಿತಿ ಸದಸ್ಯ ಬಿ ಎಸ್ ನಟರಾಜ್ ಅವರು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಪತ್ರ ಬರೆದಿದ್ದು, ಸಮುದಾಯದಲ್ಲಿ ಜಾಗೃತಿ ಮೂಡಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಜನಗಣತಿ ವರದಿಯನ್ನು ಬಿಡುಗಡೆ ಮಾಡದಂತೆ ಒತ್ತಾಯಿಸಿದ್ದಾರೆ.

ಎಚ್ ಕೆ ಕಾಂತರಾಜು ಆಯೋಗದ ವರದಿ ಪ್ರಕಾರ, ವೀರಶೈವ ಸಮುದಾಯದ ಜನಸಂಖ್ಯೆ ರಾಜ್ಯದಲ್ಲಿ ಕೇವಲ 50 ಲಕ್ಷದಷ್ಟಿದೆ ಅಂದರೆ ಶೇ 9.8ರಷ್ಟಿದೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಹಿಂದಿನ ಸಮೀಕ್ಷೆಗಳ ಪ್ರಕಾರ, ವೀರಶೈವ ಲಿಂಗಾಯತ ಜನಸಂಖ್ಯೆಯು ಶೇಕಡಾ 16ರಷ್ಟಿದ್ದರೆ, ಪರಿಶಿಷ್ಟ ಜಾತಿಗಳು ಶೇಕಡಾ 15.1, ಮುಸ್ಲಿಮರು ಶೇಕಡಾ 14 %, ಪರಿಶಿಷ್ಟ ಪಂಗಡಗಳು ಶೇಕಡಾ 6.96, ಕುರುಬರು ಶೇಕಡಾ 5 % ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಇತರ ಸಣ್ಣ ಸಮುದಾಯಗಳು ಸೇರಿವೆ.

ಪಂಚಮಸಾಲಿ ಲಿಂಗಾಯತರು ತಮ್ಮ ಹಿಂದುಳಿದಿರುವಿಕೆಯ ಆಧಾರದ ಮೇಲೆ 2ಎ ಮೀಸಲಾತಿಗೆ ಬೇಡಿಕೆ ಇಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿರುವ ಯಾವ ಜಾತಿಗಳು ತಮ್ಮ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸ್ಥಿತಿಯನ್ನು ಸುಧಾರಿಸಿಕೊಂಡಿವೆ, ಅದರ ಆಧಾರದ ಮೇಲೆ ನಾವು ಇನ್ನೂ ಹಿಂದುಳಿದಿರುವವರಿಗೆ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ಒಂದು ದೃಷ್ಟಿಕೋನವನ್ನು ತೆಗೆದುಕೊಳ್ಳಬಹುದು, ಹೀಗಾಗಿ ಜಾತಿ ಗಣತಿ ವರದಿ ಬಿಡುಗಡೆ ಆಗಲೇಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ವಿ ಎಸ್ ಉಗ್ರಪ್ಪ ಹೇಳುತ್ತಾರೆ.

ಈ ಜಾತಿ ಗಣತಿ ಬೇಡಿಕೆಯನ್ನು ಸಿಎಂ ಬೊಮ್ಮಾಯಿಯವರು ಹೇಗೆ ನಿಭಾಯಿಸುತ್ತಾರೆ ಎಂಬ ಕುತೂಹಲವಿದೆ. ಈ ವಿಚಾರವು ಅವರ ಇನ್ನುಳಿದ ಸಿಎಂ ಅವಧಿಗೆ ಕಾಡಬಹುದು. 2023 ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com