ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳನ್ನು ಕಾಂಗ್ರೆಸ್ ಎತ್ತಿ ತೋರಿಸಲಿದೆ: ಸಿದ್ದರಾಮಯ್ಯ

10 ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಕೋವಿಡ್ ನಿರ್ವಹಣೆಯಲ್ಲಿ ವಿಫಲತೆ, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ವಿಚಾರಗಳ ಹಿಡಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: 10 ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಕೋವಿಡ್ ನಿರ್ವಹಣೆಯಲ್ಲಿ ವಿಫಲತೆ, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ವಿಚಾರಗಳ ಹಿಡಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ. 

ಅಧಿವೇಶನ ಹಿನ್ನೆಲೆಯಲ್ಲಿ ಸರ್ಕಾರದ ಆಡಳಿತ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ದಿ ನ್ಯೂ ಸಂಡೆ ಎಕ್ಸ್'ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಸೋಮವಾರದಿಂದ ಅಧಿವೇಶನದಲ್ಲಿ ಆರಂಭವಾಗುತ್ತಿದ್ದು, ಪ್ರತಿಪಕ್ಷವಾಗಿರುವ ನಿಮ್ಮ ಕಾರ್ಯತಂತ್ರವೇನು?
ಅಧಿವೇಶನದ ವೇಳೆ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲಿದ್ದೇವೆ. ಬೆಲೆ ಏರಿಕೆ, ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲ, ಕೊರೋನಾ 2ನೇ ಅಲೆ ವೇಳೆ ಸಂಭವಿಸಿದ ಹೆಚ್ಚಿನ ಸಂಖ್ಯೆಯ ಸಾವುಗಳು, ಸರ್ಕಾರವು ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಪೂರೈಸುವಲ್ಲಿ ವಿಫಲವಾಗಿದ್ದು, ರಾಜ್ಯದ ಆರ್ಥಿಕ ಸ್ಥಿತಿ, ಎನ್‌ಇಪಿ, ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ಇತರೆ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗುತ್ತದೆ. 

ಸರ್ಕಾರವು ಹಲವಾರು ಮಸೂದೆಗಳನ್ನು ಮಂಡಿಸಲು ಯೋಜಿಸುತ್ತಿರುವುದರಿಂದ ಈ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳಿಗೆ ಸಾಕಷ್ಟು ಸಮಯ ಸಿಗುತ್ತದೆ ಎಂದು ನೀವು ಭಾವಿಸುತ್ತೀರಾ?
ಎಷ್ಟು ಮಸೂದೆಗಳನ್ನು ಮಂಡಿಸಲಾಗುತ್ತದೆ ಎಂಬುದು ನಮಗೆ ತಿಳಿದಿಲ್ಲ. 10 ಮಸೂದೆಗಳ ಮಂಡಿಸುವುದಾಗಿ ನಮಗೆ ತಿಳಿಸಿದ್ದಾರೆ. ವಿವಾದಿತ ಯಾವುದೇ ಮಸೂದೆಗಳಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟ ಮಾಹಿತಿಗಳಿಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತದೆ. 

ವಿರೋಧ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಹೊಂದಾಣಿಕೆ ಇದೆಯೇ?
ಖಂಡಿತ ಹೌದು. ಎರಡು ಪಕ್ಷಗಳ ನಡುವೆ ಸಹಕಾರಗಳಿರುತ್ತವೆ. 

ಬೆಲೆ ಏರಿಕೆಯ ಸಮಸ್ಯೆಯನ್ನು ಕಾಂಗ್ರೆಸ್ ಕೈಗೆತ್ತಿಕೊಳ್ಳುತ್ತಿದೆ. ಆದರೆ ಇತ್ತೀಚಿನ ನಗರ ಸ್ಥಳೀಯ ಸಂಸ್ಥೆ (ಯುಎಲ್‌ಬಿ) ಚುನಾವಣೆಗಳಲ್ಲಿ, ಕಾಂಗ್ರೆಸ್‌ಗಿಂತ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಇದು ದೊಡ್ಡ ವಿಷಯವಾಗಲಿಲ್ಲವೇ? ಚುನಾವಣೆ ಲಾಭ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲವಾಯಿತೇ? 
ಬೆಲೆ ಏರಿಕೆ ಪರಿಶೀಲಿಸಲು ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಅಧಿವೇಶನ ನಡೆದು ಆರು ತಿಂಗಳಾಗಿದೆ. ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ, ತೈಲ ಬೆಲೆ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿಲ್ಲವೇ? ನಗರ ಸ್ಥಳೀಯ ಚುನಾವಣೆಗಳಲ್ಲಿ, ಎರಡೂ ನಿಗಮಗಳಲ್ಲಿ ನಮಗೆ ಬಹುಮತ ಸಿಗುತ್ತಿತ್ತು. ಆದರೆ ಎಐಎಂಐಎಂನಿಂದಾಗಿ ನಮಗೆ ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಎಐಎಂಐಎಂನಿಂದಾಗಿ ನಾವು ಕೆಲವು ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. 

ಎಐಎಂಐಎಂನಿಂದಾಗಿ ಜಾತ್ಯತೀತ ಮತಗಳ ವಿಭಜನೆಯ ಆತಂಕವನ್ನು ಕಾಂಗ್ರೆಸ್ ಹೇಗೆ ನಿಭಾಯಿಸುತ್ತದೆ?
2023 ರಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೂ ಮೊದಲು ಜನರಿಗೆ ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ. ಎಐಎಂಐಎಂ ಬಿಜೆಪಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಎಐಎಂಐಎಂಗೆ ಮತ ಹಾಕದಂತೆ ಮತದಾರರಿಗೆ ಮನವಿ ಮಾಡಿಕೊಳ್ಳುತ್ತೇವೆ. 

ಸಂಸತ್ತಿನ ಇತ್ತೀಚಿನ ಅಧಿವೇಶನವು ಯಾವುದೇ ಚರ್ಚೆಗಳಿಲ್ಲದೆಯೇ ಕಲಾಪ ಸಂಪೂರ್ಣವಾಗಿ ಬಲಿಯಾಗಿತ್ತು. ಇದೀಗ ವಿಧಾನಸಭೆಯಲ್ಲಿ ಕೆಲವು ಅರ್ಥಪೂರ್ಣ ಚರ್ಚೆಗಳನ್ನು ಜನರು ನಿರೀಕ್ಷಿಸಬಹುದೇ?
ಸಮಸ್ಯೆಗಳನ್ನು ಕೈಗೆತ್ತಿಕೊಂಡು ಸದನದಲ್ಲಿ ಚರ್ಚಿಸುತ್ತೇವೆ. ಈಗಾಗಲೇ ಹಲವು ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಬೇಕಾಗಿದೆ, ಬಜೆಟ್ ಈಗಾಗಲೇ ಅಂಗೀಕಾರಗೊಂಡಿರುವುದರಿಂದ ಮಸೂದೆಗಳನ್ನು ಹೊರತುಪಡಿಸಿದರೆ, ಇನ್ನಾವುದೇ ವಿಷಯಗಳೂ ಇಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com