ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ: ಬಿಜೆಪಿಗಿಂತ ಕಾಂಗ್ರೆಸ್ಗೆ ಹೆಚ್ಚು ಮತ: ಡಿಕೆ ಶಿವಕುಮಾರ್

ಹುಬ್ಬಳ್ಳಿ-ಧಾರವಾಡ, ಕಲಬುರಗಿ ಪಾಲಿಕೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ, ಕಲಬುರಗಿ ಪಾಲಿಕೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ತರೀಕೆರೆ, ಬೆಳಗಾವಿಯಲ್ಲಿ ನಾವು ಮೊದಲ ಬಾರಿಗೆ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದ್ದು ಎದೆ ಗುಂದುವ  ಅಗತ್ಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮಗೆ ಸಂಖ್ಯೆ ಕಡಿಮೆ ಬಂದಿರಬಹುದು. ನಮ್ಮ ಪಕ್ಷದ ಐವರು ಬಂಡಾಯ ಸದಸ್ಯರು ಗೆದ್ದಿದ್ದು, ಎಲ್ಲ ಒಟ್ಟಾಗಿ ಸೇರಿಸಿದರೆ ಕಾಂಗ್ರೆಸ್ ವಿಚಾರ, ನಿಲುವು ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಬೆಂಬಲ ದೊರಕಿದೆ ಎಂದರು.

ಪಾಲಿಕೆ ಚುನಾವಣೆಯಲ್ಲಿ ಸಂಖ್ಯೆ ಲೆಕ್ಕದಲ್ಲಿ ನಾವು ಸೋತಿದ್ದೇವೆ. ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಎಐಸಿಸಿ ಸಹ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷದ ವೈಫಲ್ಯವನ್ನು ಗಮನಿಸಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಮುನ್ನಡೆಸಬೇಕು ಎಂಬ ಬಗ್ಗೆ ಅಭ್ಯರ್ಥಿಗಳ ಜೊತೆಗೆ ಮಾತನಾಡಿ ಕಾರ್ಯಯೋಜನೆ ರೂಪಿಸುತ್ತೇವೆ. ಈ ಬಾರಿ ನಮ್ಮ ಪಕ್ಷ 43 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಎಲ್ಲ ಸ್ಥಾನಗಳಲ್ಲಿಯೂ ಸ್ಪರ್ಧಿಸುತ್ತೇವೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com